ಬೆಳಗಾವಿ: ಭಾರೀ ಚರ್ಚೆಗೆ ಕಾರಣವಾಗಿದ್ದ ಗಂಗಾ ಕಲ್ಯಾಣ ಯೋಜನೆ ಟೆಂಡರ್ ನಿಯಮ ಉಲ್ಲಂಘನೆ ಆರೋಪ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಅಧಿವೇಶನದ ವೇಳೆ ಗಂಗಾ ಕಲ್ಯಾಣ ಯೋಜನೆ ಟೆಂಡರ್ ನಿಯಮ ಉಲ್ಲಂಘನೆ ಆರೋಪ ಸಂಬಂಧ ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗಂಗಾ ಕಲ್ಯಾಣ ಯೋಜನೆಯ 2019-20, 2020-21ನೇ ಸಾಲಿನ ಟೆಂಡರ್ ಬಗ್ಗೆ ಸಿಐಡಿ ತನಿಖೆಗೆ ನೀಡಿ ಸಿಎಂ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಇನ್ನೂ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ.ಸಭಾಪತಿ ಬಸವರಾಜ ಹೊರಟ್ಟಿ ಅವರು ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪವನ್ನು ಮುಂದೂಡಿದ್ದಾರೆ. ಸೋಮವಾರದಿಂದ ಮತ್ತೆ ಸದನದಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದೆ.
ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟಿದೆ. ಸದನದಲ್ಲಿ ಇಂದು ಸ್ಟಾಂಪ್ ನಾಲ್ಕನೇ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಬೀದಿ ಬದಿಯ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿಯಡಿ ಸ್ಟಾಂಪ್ ಶುಲ್ಕ ಮನ್ನಾ ಮಾಡಲು ಅವಕಾಶ ಮಾಡಿಕೊಡುವ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
10 ರಲ್ಲಿ 6 ಭಾರತೀಯ ಉದ್ಯೋಗಾಕಾಂಕ್ಷಿಗಳು ವಜಾಗೊಳಿಸುವಿಕೆಯಿಂದ ಖಿನ್ನತೆಗೆ ಒಳಗಾಗಿದ್ದಾರೆ: ಸಮೀಕ್ಷೆ
BREAKING NEWS : ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಮುಂದೂಡಿಕೆ |Karnataka Winter Session 2022