ಕೊಪ್ಪಳ : ಹೊಸ ಪಕ್ಷ ಘೋಷಣೆ ಮಾಡಿದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಆರಂಭದಲ್ಲೇ ಬಿಗ್ ಶಾಕ್ ಎದುರಾಗಿದ್ದು, ರೆಡ್ಡಿಯ ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ.
ಹೌದು. ಗಾಲಿ ಜನಾರ್ಧನ ರೆಡ್ಡ ಹೆಸರಿನಲ್ಲಿರುವ ಸಾಮಾಜಿಕ ಜಾಲತಾಣದ ಎಲ್ಲಾ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ. ಹ್ಯಾಕರ್ಸ್ ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ. ಜನಾರ್ಧನ ರೆಡ್ಡಿ ಆಪ್ತ ಸಹಾಯಕ ದಾಮೋದರ್ ರೆಡ್ಡಿ ಅವರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.
ರಾಜ್ಯದಲ್ಲಿ ಮಾತ್ರ ಅಲ್ಲ, ಇಡಿ ದೇಶದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಒಂದು ಪ್ರಮುಖ ಪಕ್ಷವಾಗಿ ಬೆಳೆಯಲಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಇತ್ತೀಚೆಗೆ ಹೇಳಿದ್ದರು. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಗ್ಗೆ ಬೇರೆ ಬೇರೆ ಪಕ್ಷಗಳ ನಾಯಕರು ಏನು ಮಾತಾಡುತ್ತಾರೆ, ಯಾವ ಟೀಕೆಗಳು ಮಾಡುತ್ತಾರೆ ಅನ್ನೋದರ ಬಗ್ಗೆ ತಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಆದರೆ ಜನರ ಮೇಲೆ ವಿಶ್ವಾಸವಿದೆ, ಅವರು ಕೈಬಿಡುವುದಿಲ್ಲ ಅಂತ ಚೆನ್ನಾಗಿ ಗೊತ್ತಿದೆ ಎಂದು ಹೇಳಿದ್ದರು. ಜನವರಿ 16 ರ ನಂತರ ಪಕ್ಷದ ಪ್ರಣಾಳಿಕೆ ಮತ್ತು ಅಭ್ಯರ್ಥಿಗಳ ಘೋಷಣೆ ಮಾಡುವುದಾಗಿ ಹೇಳಿದ್ದರು.
BIGG NEWS : ‘ಪಂಚಮಸಾಲಿ’ ಗೆ ಮೀಸಲಾತಿ : ರಾಜ್ಯ ಸರ್ಕಾರಕ್ಕೆ ಮತ್ತೆ ಹೊಸ ಗಡುವು…!