ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೌಮ್ಯರೆಡ್ಡಿ ಕಣಕ್ಕೆ ಇಳಿದಿದ್ದಾರೆ. ಅವರಿಗೆ ಗಾಣಿಗ ಸಮುದಾಯವು ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ.
ಬೆಂಗಳೂರಿನ ಜಯನಗರದಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸೇರುವ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಗಾಣಿಗ ಸಮುದಾಯದ ಬಂಧುಗಳು ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಸೌಮ್ಯ ರೆಡ್ಡಿ ಅವರು, ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ವಿಧಾನಪರಿಷತ್ ಮಾಜಿ ಸಭಾಪತಿಗಳಾದ ವಿ ಆರ್ ಸುದರ್ಶನ್ ರವರು, ಎಸ್ ಎಲ್ ಎನ್ ಧರ್ಮ ಸಂಸ್ಥೆಯ ಅಧ್ಯಕ್ಷರಾದ ಎಸ್ ಸುರೇಶ್ ರವರು ಕೆಪಿಸಿಸಿ ಸದಸ್ಯರಾದ ಡಿವಿ ಲಕ್ಷ್ಮಿ ರವರು ಕಾಂಗ್ರೆಸ್ ಮುಖಂಡರಾದ ಎಂ ಎಸ್ ಮುನಿರಾಜು ಅವರು ಪರಿಸರ ವೇಣುಗೋಪಾಲ್ ರವರು ಹಾಗೂ ಅನೇಕ ಸಮುದಾಯದ ಮುಖಂಡರು ಭಾಗವಹಿಸಿದ್ದರು.
ಈ ಸಭೆಯಲ್ಲಿ ನೆರೆದಿದ್ದ ಗಾಣಿಗ ಸಮುದಾಯದ ಬಂಧುಗಳು ಒಕ್ಕೊರಲಿನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸೌಮ್ಯ ರೆಡ್ಡಿ ಅವರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದರು.