Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIGG NEWS : 2027ರಲ್ಲಿ ಭಾರತದ ನೈಜ GDP ಶೇ.6.4ರಷ್ಟು ಬೆಳವಣಿಗೆ ; ಮೂಡೀಸ್ ಭವಿಷ್ಯ

09/02/2026 6:29 PM

GBA ನಗರ ಪಾಲಿಕೆಗಳ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಮುಖ್ಯ ಆಯುಕ್ತ ಮಹೇಶ್ವರ್ ರಾವ್

09/02/2026 6:25 PM

ಲಕ್ಷ್ಮಿ – ಸರಸ್ವತಿ ದೇವಿಯರ ಜಗಳದ ಪುರಾಣ ಕಥೆ | Lakshmi Saraswati jagalada kathe in kannada

09/02/2026 6:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗದ ಆರಗದಲ್ಲಿ `ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ’ ಪತ್ತೆ!
KARNATAKA

ಶಿವಮೊಗ್ಗದ ಆರಗದಲ್ಲಿ `ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ’ ಪತ್ತೆ!

By kannadanewsnow5712/09/2024 1:46 PM

ಶಿವಮೊಗ್ಗ : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಂಪಿಯ ನಿರ್ದೇಶಕರಾದ(ಪುರಾತತ್ತ್ವ )(ಪ) ಡಾ.ಆರ್.ಶೇಜೇಶ್ವರ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತೀರ್ಥಹಳ್ಳಿ ತಾಲ್ಲೂಕಿನ ಆರಗದ ವೀರಭದ್ರ ದೇವಾಲಯದ ಆವರಣದಲ್ಲಿ ಸುಮಾರು ಎರಡು ಮೀಟರ್ ಉದ್ದದ ಗ್ರಾನೈಟ್ ಶಿಲೆಯ “ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆಯಾಗಿದೆ”.

ಶಿರ ಛೇದನ ಸ್ಮಾರಕ ಶಿಲ್ಪವು ಎರಡು ಪಟ್ಟಿಕೆಗಳಿಂದ ಕೂಡಿದ್ದು ಕೆಳಗಿನ ಪಟ್ಟಿಕೆಯಲ್ಲಿ ವೇಳಾವಳಿ/ ಗರುಡ ಹೋಗುವ ವೀರ ಕುದುರೆಯ ಮೇಲೆ ಕುಳಿತು ಕತ್ತಿಯನ್ನು ಹಿಡಿದಿದ್ದಾನೆ, ಇವನಿಗೆ ಹಿಂಭಾಗದಲ್ಲಿ ಸೇವಕ ಛತ್ರಿಯನ್ನು ಹಿಡಿದಿದ್ದಾನೆ, ಆದ್ದರಿಂದ ಇವನನ್ನು ರಾಜ ಪ್ರಮುಖನೆಂದು ತಿಳಿಯಬಹುದಾಗಿದೆ. ಹಿಂಭಾಗದಲ್ಲಿ ಮಹಿಳೆಯು ಕತ್ತಿಯನ್ನು ಹಿಡಿದು ನಿಂತಿದ್ದಾಳೆ.

ಎರಡನೇ ಪಟ್ಟಕೆಯಲ್ಲಿ ಗರುಡ ಹೊಂದತಹ ವೀರನು ವೀರಾಸನದಲ್ಲಿ ನಿಂತಿದ್ದು ರುಂಡವನ್ನು ಕತ್ತರಿಸಲಾಗಿದ್ದು, ಬಲಗೈಯಲ್ಲಿ ಕತ್ತಿಯನ್ನು ಹಿಡಿದು ಮುಂಡದ ಮೇಲೆ ಹಲಗೆಯ ರೀತಿಯನ್ನು ಹೊತ್ತುಕೊಂಡಿದ್ದು ಇದನ್ನು ಕೈಯಲ್ಲಿ ಹಿಡಿದಿರುವಂತಿದೆ. ಈ ಶಿರ ಛೇದನ ಶಿಲ್ಪದ ಪಕ್ಕದಲ್ಲಿ ಮಹಿಳೆಯು ಶಿರ ಛೇದನವಾದ ರುಂಡವನ್ನು ಕೈಯಲ್ಲಿ ಹಿಡಿದು ನಿಂತಿದ್ದಾಳೆ.

ಮೂರನೇ ಪಟ್ಟಿಕೆಯಲ್ಲಿ ಪಟ್ಟಿಕೆಯ ಶಿಲ್ಪಗಳ ಬದಲು ಲಿಂಗದ ರೀತಿಯಲ್ಲಿ ಇರುವ ಕಂಬವಿದ್ದು ಇದರಲ್ಲಿ ಲಿಂಗದ ಉಬ್ಬು ಶಿಲ್ಪವಿದೆ. ಈ ಲಿಂಗದ/ಕAಬದ ಮೇಲೆ ಸಮತಟ್ಟಾಗಿದೆ. ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪದ ಮಹತ್ವ: ಆತ್ಮಬಲಿದಾನವು ಹಿಂದೂಗಳ ದೃಷ್ಟಿಯಲ್ಲಿ ಮಹತ್ವಪೂರ್ಣವಾಗಿದ್ದು, ಆತ್ಮ ಬಲಿದಾನ ಮಾಡಿಕೊಳ್ಳಲು ಶುಭ ತಿಥಿಗಳು ಒಳ್ಳೆಯವು ಎಂಬ ನಂಬಿಕೆಯಿದ್ದು, ವ್ಯಕ್ತಿಗಳು ತಮ್ಮ ಪ್ರಾಣವನ್ನು ತಾವೇ ತೆಗೆದುಕೊಳ್ಳುವಂತಹ ಅಥವಾ ಇನ್ನೊಬ್ಬರ ಸಹಾಯದಿಂದ ಮಾಡಿಕೊಳ್ಳುವಂತಹದ್ದು ಆತ್ಮ ಬಲಿದಾನ(ದೇಹತ್ಯಾಗ) ಎನ್ನಬಹುದಾಗಿದೆ.

ಆತ್ಮಬಲಿದಾನವು ಆತ್ಮಹತ್ಯೆಗಿಂತ ವಿಶೇಷವಾಗಿದ್ದು ಇದು ಸಮಾಜದ ಒಳತಿಗೋಸ್ಕರ ಆಗಿರುವಂತಹದ್ದು ಹಾಗೂ ಪೂರ್ವ ನಿಯೋಜಿತವಾಗಿರುವಂತಹದ್ದು. ಈ ಆತ್ಮ ಬಲಿದಾನದಲ್ಲಿ ಹಲವು ಬಗೆಗಳಿವೆ. ಆತ್ಮಬಲಿದಾನವನ್ನು ಮಾಡಿಕೊಂಡ ವೀರರು ಯಾವುದೇ ಹೋರಾಟದಲ್ಲಿ ಹೋರಾಡಿ ಮಡಿದವರಾಗಿರುವುದಿಲ್ಲ. ಆದರೆ ಇವರು ಯಾವುದೇ ಹೋರಾಟದಲ್ಲಿ ಮಡಿದ ವೀರರಿಗಿಂತ ಕಡಿಮೆಯಿರುವುದಿಲ್ಲ.

ಆತ್ಮ ಬಲಿದಾನದಲ್ಲಿ ಚಿತಾಪ್ರವೇಶ, ಜಲಪ್ರವೇಶ, ಊರ್ಧ್ವಪತನದ ಬಗೆಗಳಿವೆ. ಚಿತಾ ಪ್ರವೇಶ ಎಂದರೆ ಬೆಂಕಿಗೆ ಹಾರಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು, ಜಲಪ್ರವೇಶ ಎಂದರೆ ಗಂಗೆ, ವಾರಾಣಾಸಿ, ಪ್ರಯಾಗ, ತುಂಗಭದ್ರೆ ಮೊದಲಾದೆಡೆ ನೀರಿನಲ್ಲಿ ಮುಳುಗಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು ಹಾಗೂ ಊರ್ಧ್ವ ಬಲಿದಾನವೆಂದರೆ ಬೆಟ್ಟ, ಮರ ಹಾಗೂ ದೇವಾಲಯಗಳ ಶಿಖರಗಳಿಂದ ಕೆಳಗೆ ಬಿದ್ದು ಅಥವಾ ಹಾರಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು ಎನ್ನಬಹುದು.

ಈ ಆತ್ಮಬಲಿದಾನದಲ್ಲಿ ಸಹಗಮನ ಪದ್ಧತಿ, ನಿಸಿಧಿ ಶಾಸನ ಶಿಲ್ಪಗಳು, ಸೂರ್ಯಗ್ರಹಣ ಶಾಸನ ಶಿಲ್ಪಗಳು ಇದರಲ್ಲಿ ಉರಿ ಉಯ್ಯಲೆ ಶಿಲ್ಪಗಳು, ಶೂಲ ಬಲಿ, ಶಿರ ಛೇದನ(ಬಲಿ) ಶಿಲ್ಪ, ಸಿಡಿದಲೆ ಶಾಸನ ಶಿಲ್ಪಗಳು, ಇರಿತ ಬಲಿ, ಬೆಂಕಿಬಲಿ ಶಿಲ್ಪ, ಕಿಳ್ಗುಂಟೆ, ಗರುಡ ಪದ್ಧತಿ ಹಾಗೂ ವಿಶೇಷವಾಗಿ ಚಾಟಿ ವಿಟನಿಂದ ಆತ್ಮಬಲಿದಾನ ಮಾಡಿಕೊಂಡಿದ್ದು, ಇವನ ಜೊತೆಯಲ್ಲಿ ಇವನ ಹೆಂಡತಿಯು ಸಹಗಮನ ಮಾಡಿಕೊಂಡಿರುವ ಆತ್ಮಬಲಿದಾನದ ಸ್ಮಾರಕ ಶಿಲ್ಪಮೊದಲಾದ ಆತ್ಮ ಬಲಿದಾನದ ಸ್ಮಾರಕ ಶಾಸನ ಶಿಲ್ಪಗಳು ಕರ್ನಾಟಕಲ್ಲಿ ಕಂಡುಬರುತ್ತವೆ.

ಈ ಸ್ಮಾರಕ ಶಿಲ್ಪವು ಇದುವರೆಗೂ ದೊರೆತಿರುವ ಶಿರ ಛೇದನ ಶಿಲ್ಪಗಳಲ್ಲಿ ತುಂಬಾ ಅಪರೂಪದ್ದು, ಈ ಸ್ಮಾರಕ ಶಿಲ್ಪವನ್ನು ಗರುಡ ಸ್ತಂಭವೆAದು ಕರೆಯಬಹುದು. ಕರ್ನಾಟಕದಲ್ಲಿ ಇದುವರೆಗೂ ಗರುಡರಾಗಿರುವಂತಹ ಎರಡು ಸ್ತಂಭಗಳು ಹಳೇಬೀಡು ಮತ್ತು ಅಗ್ರಹಾರ ಬಾಚಿಹಳ್ಳಿಯಲ್ಲಿ ಮಾತ್ರ ಕಂಡುಬAದಿವೆ. ಇವು ಹೊಯ್ಸಳರ ಕಾಲದ್ದಾಗಿವೆ.

ಆರಗದಲ್ಲಿ ದೊರೆತಿರುವ ಈ ಶಿರ ಛೇದನ ಸ್ಮಾರಕ ಶಿಲ್ಪವು ಶಾಸನರಹಿತವಾಗಿದ್ದು, ಮೇಲ್ಬಾಗದಲ್ಲಿ ಲಿಂಗದ ಆಕೃತಿಯನ್ನು ಹೊಂದಿದ್ದರೂ ಹಳೇಬೀಡಿನಲ್ಲಿ ಕಂಡುಬರುವ ಸ್ತಂಭದ ರೀತಿಯಲ್ಲಿದೆ. ಕೆಳಭಾಗದಲ್ಲಿ ಚೌಕಾಕರಾವಾಗಿದ್ದು ಶಿಲ್ಪಗಳಿಂದ ಕೂಡಿದೆ.
ಲಿಂಗದ ರೀತಿಯ ಸ್ತಂಬದ ಮೇಲ್ಬಾಗದಲ್ಲಿ ಚಪ್ಪಟೆಯಾಗಿದೆ. ಆದ್ದರಿಂದ ಇದನ್ನು ಶಿವಲಿಂಗ ಎಂದು ಹೇಳುವುದು ಕಷ್ಟವಾಗಿದೆ. ಈ ಭಾಗವು ಹಳೆಬೀಡಿನ ಗರುಡಸ್ತಂಭದ ವೃತ್ತಾಕಾರದ ರೀತಿಯಲ್ಲಿದೆ. ಆರಗ ಶಿಲ್ಪದ ವೃತ್ತಾಕಾರದ ಸ್ತಂಭದ ಬುಡದಲ್ಲಿ ಯಾವುದೇ ಚಿಕಣಿ ಶಿಲ್ಪಗಳಿಲ್ಲ ಆದರೆ ಲಿಂಗದ ಉಬ್ಬು ಶಿಲ್ಪವನ್ನು ಕಂಡರಿಸಲಾಗಿದೆ.

ಕೆಳಭಾಗದ ಚೌಕಾಕಾರದ ಭಾಗದಲ್ಲಿ ಕೈಯಲ್ಲಿ ಹಿಡಿದಿರುವ ರುಂಡವನ್ನು ಮಹಿಳೆಯು ದೇವರಿಗೆ ಅರ್ಪಿಸಿ ಸತಿ ಹೊಗಿರಬಹುದು. ಗರುಡ ಹೋಗಿರುವಂತವರು ಶೈವರಾದಕಾರಾಗಿದ್ದು ರುಂಡವನ್ನು ಉಬ್ಬು ಶಿಲ್ಪದ ಲಿಂಗಕ್ಕೆ ಅರ್ಪಿಸಿದ್ದಾರೆ.

ಹೊಯ್ಸಳರ ಕಾಲದವರೆಗೆ ಇದ್ದಂತಹ ಗರುಡ ಪದ್ಧತಿ ವಿಜಯನಗರ ಅರಸರ ಕಾಲದಲ್ಲಿಯೂ ಮುಂದುವರೆಯಿತು ಎಂದು ಈ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆಯಿಂದ ತಿಳಿಯಬಹುದಾಗಿದೆ. ಹಳೇಬೀಡು ಮತ್ತು ಆರಗದ ಸ್ಥಂಬಗಳನ್ನು ಗಮನಿಸಿದಾಗ ಒಟ್ಟಾರೆಯಾಗಿ ಗರುಡ ಪದ್ಧತಿಯಲ್ಲಿ ಇದೇ ರೀತಿಯ ಸ್ತಂಭಳನ್ನು ಸ್ಥಾಪಿಸಿತಿದ್ದಿರಬೇಕು ಎಂಬುದನ್ನು ಊಹಿಸಬಹುದಾಗಿದೆ.

ಈ ಗರುಡ ಪದ್ಧತಿಯ ಸ್ಮಾರಕ ಶಿಲ್ಪದ ಬಗ್ಗೆ ಮಾಹಿತಿಯನ್ನು ಒದಗಿಸಿದ ಡಾ.ದೇವರಾಜಸ್ವಾಮಿ, ಡಾ. ಜಗದೀಶ, ಟಿ.ಎಂ.ಕೇಶವ, ಡಾ.ಗಂಗಾAಬಿಕೆ ಗೋವರ್ಧನ, ರಮೇಶ ಹಿರೇಜಂಬೂರು, ಶಶಿಧರ ಹಾಗೂ ಮೋಹನ್ ಇವರುಗಳಿಗೆ ಪುರಾತತ್ತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಬಳ್ಳಾರಿ ನಿರ್ದೇಶಕರಾದ ಡಾ.ಆರ್.ಶೇಜೇಶ್ವರ ಧನ್ಯವಾದಗಳನ್ನು ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

'Garuda system beheading memorial sculpture' found at Araga in Shivamogga ಶಿವಮೊಗ್ಗದ ಆರಗದಲ್ಲಿ `ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ' ಪತ್ತೆ!
Share. Facebook Twitter LinkedIn WhatsApp Email

Related Posts

GBA ನಗರ ಪಾಲಿಕೆಗಳ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಮುಖ್ಯ ಆಯುಕ್ತ ಮಹೇಶ್ವರ್ ರಾವ್

09/02/2026 6:25 PM2 Mins Read

ಲಕ್ಷ್ಮಿ – ಸರಸ್ವತಿ ದೇವಿಯರ ಜಗಳದ ಪುರಾಣ ಕಥೆ | Lakshmi Saraswati jagalada kathe in kannada

09/02/2026 6:21 PM5 Mins Read

ಧರ್ಮಾವರಂ ರೈಲ್ವೆ ಯಾರ್ಡ್ ಕಾಮಗಾರಿ: ಈ ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು

09/02/2026 6:18 PM1 Min Read
Recent News

BIGG NEWS : 2027ರಲ್ಲಿ ಭಾರತದ ನೈಜ GDP ಶೇ.6.4ರಷ್ಟು ಬೆಳವಣಿಗೆ ; ಮೂಡೀಸ್ ಭವಿಷ್ಯ

09/02/2026 6:29 PM

GBA ನಗರ ಪಾಲಿಕೆಗಳ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಮುಖ್ಯ ಆಯುಕ್ತ ಮಹೇಶ್ವರ್ ರಾವ್

09/02/2026 6:25 PM

ಲಕ್ಷ್ಮಿ – ಸರಸ್ವತಿ ದೇವಿಯರ ಜಗಳದ ಪುರಾಣ ಕಥೆ | Lakshmi Saraswati jagalada kathe in kannada

09/02/2026 6:21 PM

ಧರ್ಮಾವರಂ ರೈಲ್ವೆ ಯಾರ್ಡ್ ಕಾಮಗಾರಿ: ಈ ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು

09/02/2026 6:18 PM
State News
KARNATAKA

GBA ನಗರ ಪಾಲಿಕೆಗಳ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಮುಖ್ಯ ಆಯುಕ್ತ ಮಹೇಶ್ವರ್ ರಾವ್

By kannadanewsnow0909/02/2026 6:25 PM KARNATAKA 2 Mins Read

ಬೆಂಗಳೂರು : ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಮೂದಿಸಿರುವ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ ಎಂದು…

ಲಕ್ಷ್ಮಿ – ಸರಸ್ವತಿ ದೇವಿಯರ ಜಗಳದ ಪುರಾಣ ಕಥೆ | Lakshmi Saraswati jagalada kathe in kannada

09/02/2026 6:21 PM

ಧರ್ಮಾವರಂ ರೈಲ್ವೆ ಯಾರ್ಡ್ ಕಾಮಗಾರಿ: ಈ ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು

09/02/2026 6:18 PM

ವಿಶ್ವಾದ್ಯಂತ 560ಕ್ಕೂ ಹೆಚ್ಚು ಪ್ರೀಮಿಯಂ ಮತ್ತು ಐಷಾರಾಮಿ ಹೋಟೆಲ್‌ನೊಂದಿಗೆ ಮೇಕ್‌ ಮೈ ಟ್ರಿಪ್‌ ಪಾಲುದಾರಿಕೆ ಘೋಷಣೆ

09/02/2026 5:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.