ಬೆಂಗಳೂರು: ನಗರದಲ್ಲಿ ಭೀಕರ ಅವಘಡ ಸಂಭವಿಸಿದೆ. ಪಿಜಿಯೊಂದರಲ್ಲಿನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಓರ್ವ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯಲ್ಲಿ ಇರುವಂತ ಪಿಜಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, ಈ ದುರ್ಘಟನೆ ಸಂಭವಿಸಿದೆ. ಸಿಲಿಂಡರ್ ಸ್ಪೋಟದಲ್ಲಿ ಅರವಿಂದ್(23) ಎಂಬುವರು ದುರ್ಮರಣ ಹೊಂದಿದ್ದಾರೆ.
ಇನ್ನೂ ಈ ದುರ್ಘಟನೆಯಲ್ಲಿ ದೇವಿ, ವಿಶಾಲ್ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ. ಜೊತೆಗೆ ವೆಂಕಟೇಶ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಹೆಚ್ ಎ ಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








