Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಕೊಲಂಬಿಯಾದಲ್ಲಿ 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

23/03/2026 10:24 PM

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಸದ ವಾಣಿಜ್ಯ ಬಳಕೆ ಕಟ್ಟಡದ ಮಾಲೀಕರಿಗೆ GBA ಶಾಕ್: ಸೀಲಿಂಗ್ ಮಾಡಿ ಎಚ್ಚರಿಕೆ
KARNATAKA

ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಸದ ವಾಣಿಜ್ಯ ಬಳಕೆ ಕಟ್ಟಡದ ಮಾಲೀಕರಿಗೆ GBA ಶಾಕ್: ಸೀಲಿಂಗ್ ಮಾಡಿ ಎಚ್ಚರಿಕೆ

By kannadanewsnow0922/12/2025 8:04 PM

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದೇ ಇರುವ ವಾಣಿಜ್ಯ ಬಳಕೆ ಕಟ್ಟಡಗಳನ್ನು ಸೀಲಿಂಗ್ ಮಾಡುವ ಮೂಲಕ ತೆರಿಗೆ ವಸೂಲಾತಿಗೆ ಆದ್ಯತೆಯನ್ನು ನೀಡಿರುವುದಾಗಿ ಜಿಬಿಎ ಆಯುಕ್ತ ಡಿ.ಎಸ್.ರಮೇಶ್ ತಿಳಿಸಿದ್ದಾರೆ.

ಬೆಂಗಳೂರು ಪೂರ್ವ ನಗರ ಪಾಲಿಕೆಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಆಯುಕ್ತರಾದ ಡಿ.ಎಸ್.ರಮೇಶ್ ರವರ ಮಾರ್ಗದರ್ಶನದಂತೆ ಬಹು ವರ್ಷಗಳಿಂದ ಆಸ್ತಿ ತೆರಿಗೆ ಪಾವತಿಸದೆ ಸುಸ್ಥಿದಾರರಾಗಿರುವ ವಸತಿಯೇತರ ಬಳಕೆಯ ಬ್ಯಾಂಕ್, ಹೋಟೆಲ್, ವಾಣಿಜ್ಯ ಸಂಕೀರ್ಣ ಆಸ್ತಿಗಳನ್ನು ಸೀಲಿಂಗ್ ಮಾಡುವ ಮೂಲಕ ಬಾಕಿದಾರರರಿಗೆ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಲಾಯಿತು.

ಆಸ್ತಿ ತೆರಿಗೆ ವಸೂಲಾತಿಗೆ ಸೀಲಿಂಗ್ ಮೂಲಕ ಕಾರ್ಯಾಚರಣೆ

ಒಂದು ಮತ್ತು ಅದಕ್ಕಿಂತಲೂ ಹೆಚ್ಚಿನ ವರ್ಷಗಳ ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಆಸ್ತಿಗಳಿಗೆ ನಿಯಮಾನುಸಾರ ಈಗಾಗಲೇ ನೋಟಿಸ್ ನೀಡಿ ಸಾಕಷ್ಟು ಸಮಯಾವಕಾಶ ನೀಡಿದ್ದರೂ ಸಹಾ, ಆಸ್ತಿ ತೆರಿಗೆ ಪಾವತಿಸಿರುವುದಿಲ್ಲ.ಅಂತಹ ಸ್ವತ್ತುಗಳನ್ನು ವಲಯ ಜಂಟಿ ಆಯುಕ್ತರಾದ ಡಾ.ದಾಕ್ಷಾಯಿಣಿ.ಕೆ. ರವರ ನೇತೃತ್ವದಲ್ಲಿ ತಂಡ ರಚಿಸಿ ಉಪ ವಿಭಾಗವಾರು ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ಸ್ವತ್ತುಗಳನ್ನು ಸೀಲಿಂಗ್ ಮಾಡುವ ಮೂಲಕ ತೆರಿಗೆ ವಸೂಲಾತಿಗೆ ಆದ್ಯತೆ ನೀಡಲಾಯಿತು ಎಂದು ಆಯುಕ್ತರು ತಿಳಿಸಿದರು.

ಸೀಲಿಂಗ್ ಮಾಡಲಾದ ಆಸ್ತಿಗಳ ವಿವರಗಳು

* ಶಾಮಣ್ಣ
72/1, ಬೆಳ್ಳಂದೂರು ಗ್ರಾಮ, ಔಟರ್ ರಿಂಗ್ ರೋಡ್, ಬೆಂಗಳೂರು

* ಎನ್. ದಸ್ತಗಿರಿ ಸಾಬ್
131, ಮಾರ್ಗೋಸಾ ಅವೆನ್ಯೂ, ಜಿ.ಜಿ.ಎಲ್., ಬೆಳ್ಳಂದೂರು ಗ್ರಾಮ

* ವಿ. ನಾರಾಯಣಪ್ಪ
34, ರಿಂಗ್ ರೋಡ್, ಬೆಳ್ಳಂದೂರು ಗ್ರಾಮ, ಬೆಂಗಳೂರು

* ಎನ್. ಲಿಂಗಾರೆಡ್ಡಿ
ನಂ.74/1, ಔಟರ್ ರಿಂಗ್ ರೋಡ್, ಬೆಳ್ಳಂದೂರು ಗ್ರಾಮ

* ಕೆ.ಎಂ. ಅಣ್ಣಯ್ಯಪ್ಪ, ಡಿ. ಯಲ್ಲಪ್ಪ ಹಾಗೂ ಕೆ.ಎಂ. ಮುನಿಯಪ್ಪ
ಸೈಟ್ ನಂ.2, ಕೈಗೊಂಡರ ಹಳ್ಳಿ ಗ್ರಾಮ

* ಎನ್. ದಸ್ತಗಿರಿ ಸಾಬ್
113ಎ, ಜಿ.ಜಿ.ಎಲ್., ಬೆಳ್ಳಂದೂರು ಗ್ರಾಮ, ಬೆಂಗಳೂರು

* ಕೆ.ಆರ್. ಅನಂತ್ ಕುಮಾರ್
ಕೈಕೊಂಡರಹಳ್ಳಿ ಗ್ರಾಮ,

* ಶ್ರೀಧರ್ ಪಂಪಾಟಿ
ನಂ. 8/8/2-10, ತೃತೀಯ ಮಹಡಿ, ಅಂಬಲಿಪುರ ಗ್ರಾಮ

* ಮಂಜುಳಾ ಸಿ
ನಂ.79/7, ಬೆಳ್ಳಂದೂರು ಗ್ರಾಮ, ಬೆಂಗಳೂರು

ಅತಿ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ನಗರ ಪಾಲಿಕೆ ಆಯುಕ್ತರು ತಿಳಿಸಿದ್ದು, ಸಾರ್ವಜನಿಕರು ಸಮಯಕ್ಕೆ ಸರಿಯಾಗಿ ಆಸ್ತಿ ತೆರಿಗೆ ಪಾವತಿಸುವಂತೆ ಈ ಮೂಲಕ ಮನವಿ ಮಾಡಲಾಗಿದೆ.

ಮೂಲಸೌಕರ್ಯ ಅಭಿವೃದ್ಧಿ ಪರಿಶೀಲನಾ ಸಭೆ

ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ರವರ ಅಧ್ಯಕ್ಷತೆಯಲ್ಲಿ ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಕ್ಷಾ–75 ಯೋಜನೆಯಡಿ ಪ್ರಮುಖ ಜಂಕ್ಷನ್ ಅಭಿವೃದ್ಧಿ ಕುರಿತು ಪರಿಶೀಲನಾ ಸಭೆಯನ್ನು ಇಂದು ನಡೆಸಲಾಯಿತು.

ಸಭೆಯಲ್ಲಿ ಚರ್ಚಿಸಿಲಾದ ವಿಷಯಗಳು

* ಮಾರತಹಳ್ಳಿ, ವರ್ತೂರು ಕೋಡಿ, ಬಾಗ್ಮನೆ ಟೆಕ್ ಪಾರ್ಕ್, ಕುಂದಲಹಳ್ಳಿ, ಹೊರ ವರ್ತುಲ ರಸ್ತೆ–ಎಂಬಸಿ ಟೆಕ್ ವಿಲೇಜ್ ಹಾಗೂ ಸರ್ಜಾಪುರ ಜಂಕ್ಷನ್ ಗಳ ಸಮಗ್ರ ಅಭಿವೃದ್ಧಿ ಹಾಗೂ ಕಾಮಗಾರಿ ವೇಗ ನೀಡಲು ಸೂಚಿಸಲಾಯಿತು.
* ಹೊರ ವರ್ತುಲ ರಸ್ತೆ ಪ್ರವೇಶ ಮತ್ತು ನಿರ್ಗಮನ ದ್ವಾರಗಳ ಸಮಗ್ರ ಅಭಿವೃದ್ಧಿ ಪಡಿಸಿ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ.
* ಹೊರ ವರ್ತುಲ ರಸ್ತೆಯಲ್ಲಿರು ಫ್ಲೈಓವರ್ ಮತ್ತು ಅಂಡರ್‌ಪಾಸ್ ಸಮೀಪದ ಪಾದಚಾರಿ ಮಾರ್ಗದ ಅತಿಕ್ರಮಣವನ್ನು ತೆರವುಗೊಳಿಸಲು ಮೈಕ್ರೋಪ್ಲಾನ್ ಸಿದ್ದತೆ ಮಾಡಿಕೊಂಡು ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ.
* ಪರಿತ್ಯಾಜನ ಪತ್ರ (ಆರ್.ಡಿ) ಆಗಿರುವ ಸ್ವತ್ತುಗಳ ಅತಿಕ್ರಮಣ ತೆರವುಗೊಳಿಸಿ ಕೂಡಲೇ ನಗರ ಪಾಲಿಕೆ ವಶಕ್ಕೆ ಪಡೆಯಲು ಅಧಿಕಾರಿಗಳಿಗೆ ಸೂಚಿಸಿದರು.

ಪಿ.ಜಿ ತಪಾಸಣೆ

ಅಪರ ಆಯುಕ್ತರು (ಕಂದಾಯ) ಪ್ರಜ್ಞಾ ಅಮ್ಮೆಂಬಳ ರವರು ಕಾಡುಗೋಡಿಯ ವ್ಯಾಪ್ತಿಯಲ್ಲಿರುವ ವೈಟ್ ರೋಸ್ ಲೇಔಟ್, ಎ.ಎಲ್ ಕೋ ಲಿವಿಂಗ್ ಪಿ.ಜಿಯಲ್ಲಿ ತಪಾಸಣೆ ನಡೆಸಿದರು. ತಪಾಸಣೆ ವೇಳೆಯಲ್ಲಿ ಉದ್ದಿಮೆ ಪರವಾನಗಿ ನವೀಕರಣ ಮಾಡದೇ ಪಿ.ಜಿ ಕಾರ್ಯಾಚರಣೆ ನಡೆಸುತ್ತಿರುವುದು ಕಂಡುಬಂದಿದ್ದು, ಪಿ.ಜಿ. ಉಪಹಾರ ಗೃಹದಲ್ಲಿ ಸ್ವಚ್ಚತೆ ಕಾಪಾಡದೇ ಇರುವುದರಿಂದ ನಿಯಮಾನುಸಾರ ₹50,000 ದಂಡ ವಿಧಿಸಲಾಯಿತು ಎಂದು ಅಪರ ಆಯುಕ್ತರು ತಿಳಿಸಿದರು. ಈ ತಪಾಸಣೆಯಲ್ಲಿ ವೈದ್ಯಾಧಿಕಾರಿ ಹಾಗೂ ಆರೋಗ್ಯ ಮೇಲ್ವಿಚಾರಕರು ಹಾಜರಿದ್ದರು.

ಇಂದು ನಡೆದ ಸಭೆಯಲ್ಲಿ ಮುಖ್ಯ ಅಭಿಯಂತರರಾದ ಶ್ರೀ ಕೃಷ್ಣಮೂರ್ತಿ, ಕಾರ್ಯನಿರ್ವಾಹಕ ಅಭಿಯಂತರು ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ಭಾಗವಹಿಸಿದ್ದರು.

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಶಿವಮೊಗ್ಗದಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿ ಚಾಕು ಇರಿತ

BIG NEWS: ಬೆಂಗಳೂರಿನ ‘ವಿಕ್ಟೋರಿ ಆಸ್ಪತ್ರೆ ಜನತಾ ಬಜಾರ್’ನಲ್ಲಿ ‘ಬದಲಿ ಔಷಧ’ಗಳ ದಂಧೆ: ರೋಗಿಗಳ ‘ಪ್ರಾಣ’ದ ಜೊತೆ ಚೆಲ್ಲಾಟ

Share. Facebook Twitter LinkedIn WhatsApp Email

Related Posts

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM1 Min Read

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM2 Mins Read

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM1 Min Read
Recent News

BIG BREAKING: ಕೊಲಂಬಿಯಾದಲ್ಲಿ 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

23/03/2026 10:24 PM

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM
State News
KARNATAKA

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

By kannadanewsnow0923/03/2026 9:57 PM KARNATAKA 1 Min Read

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಡೆದ ಎರಡು ಬೈಕ್‌ಗಳ ನಡುವಿನ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ…

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM

ALERT : ಲೈಂಗಿಕ ಸುಖಕ್ಕಾಗಿ `ಸೆಕ್ಸ್ ಟಾಯ್ಸ್’ ಬಳಸುವುದು ತಪ್ಪೋ ? ಸರಿಯೋ ?  ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

23/03/2026 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.