ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಶುಚಿತ್ವ ಇಲ್ಲದ ಆರು ಪಿ.ಜಿ ಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ತಿಳಿಸಿದ್ದಾರೆ.
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಆಯುಕ್ತರಾದ ರಾಜೇಂದ್ರ ಚೊಳನ್ ರವರ ಆದೇಶದಂತೆ ಇಂದು 204 ಪೇಯಿಂಗ್ ಗೆಸ್ಟ್ ವಸತಿಗೃಹ ಉದ್ದಿಮೆಗಳನ್ನು ಆರೋಗ್ಯಾಧಿಕಾರಿಯಾದ ಡಾ.ಶಿವಕುಮಾರ್ ಅವರ ನೇತೃತ್ವದಲ್ಲಿ ಚಿಕ್ಕಪೇಟೆ ಮತ್ತು ಶಿವಾಜಿನಗರ ಆರೋಗ್ಯ ವೈದ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ತಪಾಸಣೆ ನಡೆಸಿದ್ದು, ಶುಚಿತ್ವ ಕಾಪಾಡದ 6 ಪಿ.ಜಿ. ಗಳಿಗೆ ಬೀಗ ಮುದ್ರೆ ಹಾಕುವುದರ ಜೊತೆಗೆ ನ್ಯೂನ್ಯತೆಗಳಿರುವ ಪಿ.ಜಿ ಗಳಿಗೆ 1.96 ಲಕ್ಷ ರೂ. ದಂಡ ವಿಧಿಸಲಾಗಿದೆ.
ಶಿವಾಜಿನಗರ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಪೇಯಿಂಗ್ ಗೆಸ್ಟ್ ವಸತಿಗೃಹಗಳಲ್ಲಿ (PGs) ಶುದ್ಧ ಕುಡಿಯುವ ನೀರು, ಶುಚಿತ್ವ, ಅಡುಗೆ ಕೋಣೆ ನೈರ್ಮಲ್ಯ, ಸುರಕ್ಷತೆ, ಉತ್ತಮ ಶೌಚಾಲಯ ವ್ಯವಸ್ಥೆ, ಅಗ್ನಿಶಾಮಕ ಸಾಧನಗಳು ಹಾಗೂ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಕೆ ಮತ್ತು FSSAI ನ ಆಹಾರ ಸುರಕ್ಷತಾ ಪ್ರಮಾಣ ಪತ್ರ ಇತ್ಯಾದಿ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಒಟ್ಟು 204 ಪೇಯಿಂಗ್ ಗೆಸ್ಟ್ ವಸತಿಗೃಹ ಉದ್ದಿಮೆಗಳನ್ನು ತಪಾಸಣೆ ನಡೆಸಿಸಲಾಯಿತು.
ಎಲ್ಲಾ ಪಿ.ಜಿ ಯನ್ನು ನಡೆಸುತ್ತಿರುವವರಿಗೆ ತಿಳುವಳಿಕೆ ಪತ್ರಗಳನ್ನು ಜಾರಿ ಮಾಡಲಾಗಿದ್ದು, ಸದರಿ ಉದ್ದಿಮೆದಾರರು ಏಳು ದಿನಗಳ ಒಳಗಾಗಿ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು, ಕಾರ್ಯನಿರ್ವಹಣೆ ಮಾಡುವುದಕ್ಕೆ ಸೂಚಿಸಲಾಗಿರುತ್ತದೆ.
ತಪಾಸಣೆ ಕಾರ್ಯದಲ್ಲಿ ಕಂದಾಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು ಪೇಯಿಂಗ್ ಗೆಸ್ಟ್ ಕಟ್ಟಡದ ಆಸ್ತಿ ತೆರಿಗೆ ಮತ್ತು ಇತರೆ ತೆರಿಗೆಗಳ ವಿಷಯವಾಗಿ ಪರಿಶೀಲನೆ ನಡೆಸಿದರು.
ಪರಿಶೀಲನೆಯ ವೇಳೆ ಆರೋಗ್ಯ ವೈದ್ಯಾಧಿಕಾರಿಗಳು, ಆರೋಗ್ಯ ಪರಿವೀಕ್ಷಕರು, ಕಂದಾಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
GOOD NEWS: ಪಠ್ಯೇತರ ಚಟುವಟಿಕೆ ನಿರ್ವಾಹಣೆಗಾಗಿ ವಿಟಿಯುನಿಂದ ಮೊಬೈಲ್ ಆ್ಯಪ್ ಬಿಡುಗಡೆ
SHOCKING: ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ.!








