ಬೆಂಗಳೂರು: ಕೆಪಿಸಿಸಿ ರಾಜ್ಯ ಮಟ್ಟದ ಇಂಡಿಯಾ ಬ್ಲಾಕ್ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಹಾಗೂ ಸಂಚಾಲಕರಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಹಾಗೂ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಆದೇಶ ಮಾಡಿದ್ದಾರೆ. ಅದರಲ್ಲಿ ದೇಶದ ಸಂವಿಧಾನವನ್ನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ 2024ರ ಲೋಕಸಭಾ ಚುನಾವಣೆ ಅತ್ಯಂತ ಮಹತ್ತರ ಚುನಾವಣೆಯಾಗಿರುತ್ತದೆ ಎಂದಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಇಂಡಿಯಾ ಬ್ಲಾಕ್ ಪಕ್ಷಗಳು ಪರಸ್ಪರ ಸಹಕಾರ ಮತ್ತು ಸಮನ್ವಯತೆಯೊಂದಿಗೆ ಚುನಾವಣೆಯನ್ನು ಎದುರಿಸುತ್ತಿವೆ. ಈ ನಿಟ್ಟಿನಲ್ಲಿ ಕರ್ನಾಟಕದ ಎರಡು ಹಂತದ ಲೋಕಸಭಾ ಚುನಾವಣೆಯಲ್ಲಿ ಪರಸ್ಪರ ಹೊಂದಾಣಿಕೆ ಮತ್ತು ಒಟ್ಟಾಗಿ ನಡೆಸುವ ದೃಷ್ಟಿಯಿಂದ ಕೆಳ ಹಂತದಲ್ಲಿ ಡಿಸಿಸಿ ಅಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮಿತ್ರ ಪಕ್ಷಗಳೊಂದಿಗೆ ಸಮನ್ವಯ ಸಮಿತಿಗಳನ್ನು ರಚಿಸಿಕೊಂಡು, ಲೋಕಸಭಾ ಚುನಾವಣೆಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೆಪಿಸಿಸಿ ನಿರ್ಧರಿಸಿದೆ ಎಂದಿದೆ.
ಲೋಕಸಭಾ ಚುನಾವಣೆಗೆ ಪೂರಕವಾಗಿ ಕೆಪಿಸಿಸಿ ರಾಜ್ಯಮಟ್ಟದಲ್ಲಿ ಈ ಕೆಳಕಂಡಂತೆ ಇಂಡಿಯಾ ಬ್ಲಾಕ್ ಸಮನ್ವಯ ಸಮಿತಿಯನ್ನು ರಚಿಸಿರುತ್ತದೆ ಎಂದು ತಿಳಿಸಿದ್ದಾರೆ.
- ಜಿ.ಸಿ ಚಂದ್ರಶೇಖರ್ – ಅಧ್ಯಕ್ಷರು
- ರಮೇಶ್ ಬಾಬು – ಸಂಚಾಲಕರು
- ಸಾತಿ ಸುಂದರೇಶ್- ಸದಸ್ಯರು
- ಬಸವರಾಜು – ಸದಸ್ಯರು
- ಮಂಜಪ್ಪ ಯಾದವ್ – ಸದಸ್ಯರು
- ಸಂಚಿತ್ ಸಹಾನೀ-ಸದಸ್ಯರು
- ರಾಮಸ್ವಾಮಿ ನಟೇಶನ್ – ಸದಸ್ಯರು
- ಸಿಎಸ್ ಇನಾಮ್ದಾರ್ – ಸದಸ್ಯರು
- ಕ್ಲಿಪ್ಪನ್ ಡಿ ರೊಜೆರಿಯೋ – ಸದಸ್ಯರು
- ಶಿವಶಂಕರ್ ಜಿಆರ್- ಸದಸ್ಯರು
- ಜಾವಿದುಲ್ಲಾ – ಸದಸ್ಯರು
BREAKING NEWS : 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ : ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ !