ಬೆಂಗಳೂರು: ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸೋ ನಿಟ್ಟಿನಲ್ಲಿ ಜಿಸಿಸಿ ನೀತಿ ನಿಯಮಾವಳಿಗಳನ್ನು ಸಡಿಲಿಕೆ ಮಾಡಲಾಗುತ್ತದೆ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಮೂಲಸೌಕರ್ಯ ವೃದ್ಧಿಗೆ ಬಂಡವಾಳ ಹೂಡಲು ಉದ್ಯಮಿದಾರರನ್ನು ಸೆಳೆಯಲು ಮತ್ತು ಉದ್ಯೋಗಾವಕಾಶ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಜಿಸಿಸಿ ನೀತಿಯ ನಿಯಮಾವಳಿಗಳನ್ನು ಸಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 27ನೇ ಆವೃತ್ತಿ ನವೆಂಬರ್ 19 ರಿಂದ 21ರ ವರೆಗೆ ನಡೆಯಲಿದೆ.
ಟೆಕ್ ಶೃಂಗಸಭೆಯ ಈ ವರ್ಷದ ಘೋಷವಾಕ್ಯ ʼಬ್ರೇಕಿಂಗ್ ಬೌಂಡರೀಸ್ʼ ಆಗಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸತನವನ್ನು ಹೆಚ್ಚಿಸಲು ವೈವಿಧ್ಯಮಯ ವಲಯಗಳ ನಡುವಿನ ಸಹಯೋಗದ ಪ್ರಾಮುಖ್ಯತೆಯನ್ನು ಘೋಷವಾಕ್ಯ ಒಳಗೊಂಡಿದೆ. ಶೃಂಗಸಭೆಯಲ್ಲಿ ಕೈಗಾರಿಕೆ ಹಾಗೂ ವ್ಯವಹಾರಗಳನ್ನು ಮರುರೂಪಿಸುತ್ತಿರುವ ತಾಂತ್ರಿಕ ಪ್ರಗತಿಗಳು ಮತ್ತು ಪ್ರವೃತ್ತಿಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವೇದಿಕೆಯಲ್ಲೇ ‘ಸಿಎಂ ಸಿದ್ಧರಾಮಯ್ಯ’ ಹಾಡಿ ಹೊಗಳಿದ ‘BJP ಶಾಸಕ ಮುನಿರತ್ನ’
BIG NEWS: ‘ರಾಜ್ಯ ಸರ್ಕಾರ’ದಿಂದ ಮಹಾ ಎಡವಟ್ಟು: ‘ಸತ್ತ ಅಧಿಕಾರಿ’ಯನ್ನೇ ವರ್ಗಾವಣೆ