BREAKING: ‘ಚುನಾವಣಾ ರಾಜಕೀಯ’ಕ್ಕೆ ನಿವೃತ್ತಿ ಘೋಷಿಸಿದ ‘ಗೀತಾ ಶಿವರಾಜ್ ಕುಮಾರ್’ | Geetha Shivarajkumar

ಶಿವಮೊಗ್ಗ: ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬುದಾಗಿ ಹೇಳುವ ಮೂಲಕ, ಗೀತಾ ಶಿವರಾಜ್ ಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ನಾನು ಇನ್ನೂ ಶಿವಮೊಗ್ಗದಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಚುನಾವಣೆಗೆ ಸ್ಪರ್ಧಿಸದೇ ಇದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ. ನಿಮ್ಮೊಂದಿಗೆ ಕೆಲಸ ಮಾಡುವೆ. ಯಾವಾಗ ಕರೆದರೂ ಬರುವುದಾಗಿ ತಿಳಿಸಿದರು. ನೂತನ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ … Continue reading BREAKING: ‘ಚುನಾವಣಾ ರಾಜಕೀಯ’ಕ್ಕೆ ನಿವೃತ್ತಿ ಘೋಷಿಸಿದ ‘ಗೀತಾ ಶಿವರಾಜ್ ಕುಮಾರ್’ | Geetha Shivarajkumar