ನವದೆಹಲಿ: ಸೇನಾಪಡೆಗಳ ಮುಖ್ಯಸ್ಥ(ಸಿಡಿಎಸ್)ರಾಗಿ ಇಂದು ಲೆಫ್ಟಿನೆಂಟ್ ಜನರಲ್(ನಿವೃತ್ತ) ʻಅನಿಲ್ ಚೌಹಾಣ್(Anil Chauhan)ʼ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ನಿಧನರಾದ ಒಂಬತ್ತು ತಿಂಗಳ ನಂತರ ಅನಿಲ್ ಚೌಹಾಣ್ ಅಧಿಕಾರ ಸ್ವೀಕರಿಸಿದ್ದಾರೆ.
Delhi | General Anil Chauhan with his wife Anupama Chauhan in the office of Chief of Defence Staff after taking over today.
He is India’s second Chief of Defence Staff. pic.twitter.com/cIgxOF7CbB
— ANI (@ANI) September 30, 2022
ಚೌಹಾಣ್ ಅವರು ಇಂದು ಸೌತ್ ಬ್ಲಾಕ್ನಲ್ಲಿ ಗಾರ್ಡ್ ಆಫ್ ಆನರ್ ಅನ್ನು ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅನಿಲ್ ಚೌಹಾಣ್, ʻಭಾರತೀಯ ಸಶಸ್ತ್ರ ಪಡೆಗಳ ಅತ್ಯುನ್ನತ ಹುದ್ದೆ ಸ್ವೀಕರಿಸಿರುವುದಕ್ಕೆ ನನಗೆ ಹೆಮ್ಮೆಯಾಗುತ್ತಿದೆ. ನಾನು ಮೂರು ಸೇವೆಗಳ ನಿರೀಕ್ಷೆಗಳನ್ನು ಪೂರೈಸಲು ಪ್ರಯತ್ನಿಸುತ್ತೇನೆ. ನಾವು ಎಲ್ಲಾ ಸವಾಲುಗಳು ಮತ್ತು ತೊಂದರೆಗಳನ್ನು ಒಟ್ಟಿಗೆ ನಿಭಾಯಿಸುತ್ತೇವೆʼ ಎಂದಿದ್ದಾರೆ.
ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ, ನೌಕಾಪಡೆಯ ಉಪಾಧ್ಯಕ್ಷ ವೈಸ್ ಅಡ್ಮಿರಲ್ ಎಸ್ ಎನ್ ಘೋರ್ಮಾಡೆ ಮತ್ತು ಏರ್ ಮಾರ್ಷಲ್ ಬಿಆರ್ ಕೃಷ್ಣ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ʻಅನಿಲ್ ಚೌಹಾಣ್ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ಕೇಂದ್ರದ ರಕ್ಷಣಾ ವ್ಯವಹಾರಗಳ ಇಲಾಖೆ ಕಾರ್ಯದರ್ಶಿಯಾಗಿ ಮುಂದಿನ ಆದೇಶದವರೆಗೆ ಕಾರ್ಯನಿರ್ವಹಿಸಲಿದ್ದಾರೆ’ ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.
BIGG NEWS : ‘ವಂದೇ ಭಾರತ್ ಎಕ್ಸ್ಪ್ರೆಸ್’ ರೈಲಿನಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ | Vande Bharat Express