ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರಂ ಹಾಗೂ ಕಾರ್ಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 108 ವಾಹನ ಶೀಘ್ರ ಪೂರೈಕೆ ಮಾಡಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಂದು ತಮ್ಮ ನಿವಾಸದಲ್ಲಿ ಆರೋಗ್ಯ ಇಲಾಖೆ ಅಧಿಕಾರಗಳ ಜೊತೆ ಸಭೆ ನಡೆಸಿದ ಅವರು, 108 ವಾಹನ ದುರಸ್ತಿಯಲ್ಲಿದೆ. ಅದನ್ನು ತಕ್ಷಣ ರಿಪೇರಿ ಮಾಡಿಸಿ ಸಾರ್ವಜನಿಕ ಸೇವೆಗೆ ಕಳಿಸಬೇಕು ಎಂದು ಹೇಳಿದರು.
ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಸಿಬ್ಬಂದಿಗಳ ಕೊರತೆ ಇದೆ. ಇದರ ಜೊತೆಗೆ ಫಾರ್ಮಸಿಸ್ಟ್ ಸಹ ಕೆಲವು ಕಡೆಗಳಲ್ಲಿ ಇಲ್ಲ ಎನ್ನುವ ದೂರು ಇದೆ. ಒಂದು ವಾರದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ತಾಯಿಮಗು ಆಸ್ಪತ್ರೆಯಲ್ಲಿ ಜನರೇಟರ್ ಕಳ್ಳತನ ನಡೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ವಶಕ್ಕೆ ಪಡೆದು ತನಿಖೆ ನಡೆಯುತ್ತಿದೆ. ತಪ್ಪು ಯಾರೆ ಮಾಡಿದ್ದರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ತಪ್ಪಿತಸ್ತರನ್ನು ಬಚಾವು ಮಾಡುವ ಪ್ರಯತ್ನ ಮಾಡಬೇಡಿ. ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ, ಆಸ್ಪತ್ರೆಗಳಲ್ಲಿ ಸ್ವಚ್ಚತೆ, ಮೂಲಭೂತ ಸೌಲಭ್ಯಗಳ ಕಲ್ಪಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ಡಿಹೆಚ್ಓ ಡಾ. ನಟರಾಜ್, ಸಾಗರ ಉಪ ವಿಭಾಗೀಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸುರೇಶ್ ಎಲ್., ಪ್ರಮುಖರಾದ ಟಿ.ಪಿ.ರಮೇಶ್, ಗಣಪತಿ ಮಂಡಗಳಲೆ, ಜಯರಾಮ್ ಇನ್ನಿತರರು ಹಾಜರಿದ್ದರು.
ಸಾಗರ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧ್ಯಯನ ಪ್ರವಾಸಕ್ಕೆ ಅಪಸ್ವರ: ಒಲ್ಲೆಯೆಂದ ಆಡಳಿತ ಪಕ್ಷದ ಸದಸ್ಯರು
GOOD NEWS: ಬಿಬಿಎಂಪಿ ವ್ಯಾಪ್ತಿಯಲ್ಲಿ ಆನ್ ಲೈನ್, ಫೇಸ್ ಲೆಸ್ ‘ಇ-ಖಾತಾ ವ್ಯವಸ್ಥೆ’ ಜಾರಿ