ಹುಬ್ಬಳ್ಳಿ: ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ( genomic sequencing lab ) ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಅಗತ್ಯವಿರುವ ಪರಿಣಿತ ವ್ಯವಸ್ಥೆಗಳ ಬಗ್ಗೆ ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು ತಿಳಿಸಿದರು.
MLC Election: ಬಿಜೆಪಿಗೆ ಯಾವ ಪಕ್ಷದ ಮೈತ್ರಿಯೂ ಅನಿವಾರ್ಯವಿಲ್ಲ: ಜೆಡಿಎಸ್ ಗೆ ಟಾಂಗ್ ಕೊಟ್ಟ ಬಿಜೆಪಿ ಸಂಸದ
ಇಂದು ತಮ್ಮ ಹುಬ್ಬಳ್ಳಿ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಗೆ ಪ್ರಯೋಗಾಲಯಗಳಿವೆ. ಜಿನೋಮ್ ಸೀಕ್ವೆನ್ಸಿಂಗ್ ಗೆ ಪರಿಣಿತ ವ್ಯವಸ್ಥೆ ಅಗತ್ಯ. ಒಮಿಕ್ರಾನ್ ಬಂದಿದ್ದರಿಂದ ಸಂಶಯವಿದ್ದಲ್ಲಿ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಗಾಗಿ ಎನ್.ಸಿ.ಬಿ.ಎಸ್ ಗೆ ಕಳುಹಿಸಲಾಗುತ್ತಿದೆ. ಅತಿ ಶೀಘ್ರ ದಲ್ಲಿ ಪರೀಕ್ಷೆಯ ವರದಿ ಬರಲಿದೆ ಬರುವ ವ್ಯವಸ್ಥೆ ಆಗಲಿದೆ ಎಂದರು.
BIG BREAKING NEWS: ‘ಪರಿಷತ್ ಚುನಾವಣೆ’ಯಲ್ಲಿ ‘ಬಿಜೆಪಿ ಜತೆ ಜೆಡಿಎಸ್ ಮೈತ್ರಿ’ಯಿಲ್ಲ – ಮಾಜಿ ಸಿಎಂ ಕುಮಾರಸ್ವಾಮಿ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಮಾನವದಿನಗಳನ್ನು ಕಡಿತ ಮಾಡಿರುವ ಬಗ್ಗೆ ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಈಗಾಗಲೇ ಕೆ.ಎಸ್.ಈಶ್ವರಪ್ಪ ಅವರು ಈ ಬಗ್ಗೆ ಉತ್ತರ ನೀಡಿದ್ದಾರೆ ಎಂದರು.
Crime News: ಬೆಂಗಳೂರಿನಲ್ಲಿ ಐವರು ಡ್ರಗ್ ಪೆಡ್ಲರ್ ಅರೆಸ್ಟ್: 10 ಲಕ್ಷ ರೂ ಮೌಲ್ಯದ ಮಾದಕ ವಸ್ತುಗಳ ವಶ
ಬೊಮ್ಮಾಯಿ ಅವರು ಸುಳ್ಳು ಹೇಳುತ್ತಾರೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಬಗ್ಗೆ ನನಗೆ ಅಪಾರ ಗೌರವವಿತ್ತು. ಅವರ ಇತ್ತೀಚಿನ ಹೇಳಿಕೆಗಳು ನನಗೆ ನಿರಾಶೆ ಉಂಟು ಮಾಡಿದೆ ಎಂದರು.