ಬೆಂಗಳೂರು: ಅರಣ್ಯ ಇಲಾಖೆಯ ವತಿಯಿಂದ ನೆಡಲಾಗುವ ಸಸಿಗಳ ಬೆಳವಣಿಗೆ ಮೇಲೆ ನಿಗಾವಹಿಸಲು ಪ್ರತಿ ಸಸಿಯನ್ನು ಜಿಯೊ ಟ್ಯಾಗ್ ಮೂಲಕ ದಾಖಲೀಕರಣ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಇದರಿಂದ ಸಸಿ ಯಾವ ವರ್ಷ ಎಷ್ಟು ಬೆಳೆಯಿತು? ಸ್ಥಿತಿಗತಿ ಏನಿದೆ ಎಂಬ ಮಾಹಿತಿ ಇಲಾಖೆ ವೆಬ್‌ಸೈಟ್‌ನಲ್ಲಿ ಸಿಗಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಅರಣ್ಯ ಇಲಾಖೆಯ ವತಿಯಿಂದ ನೆಡಲಾಗುವ ಸಸಿಗಳ ಬೆಳವಣಿಗೆ ಮೇಲೆ ನಿಗಾವಹಿಸಲು ಪ್ರತಿ ಸಸಿಯನ್ನು ಜಿಯೊ ಟ್ಯಾಗ್ ಮೂಲಕ ದಾಖಲೀಕರಣ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಇದರಿಂದ ಸಸಿ ಯಾವ ವರ್ಷ ಎಷ್ಟು ಬೆಳೆಯಿತು? ಸ್ಥಿತಿಗತಿ ಏನಿದೆ ಎಂಬ ಮಾಹಿತಿ ಇಲಾಖೆ ವೆಬ್‌ಸೈಟ್‌ನಲ್ಲಿ ಸಿಗಲಿದೆ ಎಂದು ಅರಣ್ಯ ಸಚಿವರಾದ @eshwar_khandre ಅವರು… pic.twitter.com/tuPupAcNgd
— DIPR Karnataka (@KarnatakaVarthe) May 12, 2025
ಇತ್ತೀಚೆಗೆ ಸುಪ್ರೀಂಕೋರ್ಟ್ ಸಹ ಹೆಚ್ಚಿನ ಮರಗಳನ್ನು ಕಡಿಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪ್ರಸಕ್ತ ಸನ್ನಿವೇಶದಲ್ಲಿ ವೃಕ್ಷ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು.
ಅಭಿವೃದ್ಧಿಯ ಹೆಸರಲ್ಲಿ ನೂರಾರು ಮರಗಳ ಕಡಿತಲೆಗೆ ಅನುಮತಿ ನೀಡುತ್ತಿರುವ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಮರ ಕಡಿಯಲು ಅನುಮತಿ ನೀಡಬಾರದು ಎಂದು ಸೂಚನೆ ನೀಡಿದರು.
2015ರ ಪೂರ್ವದಲ್ಲಿ ಪಟ್ಟಾ ಜಮೀನು ಮತ್ತು ಒತ್ತುವರಿ ಸೇರಿ 3 ಎಕರೆಗಿಂತ ಕಡಿಮೆ ಇರುವ ಬಡ ಜನರಿಗೆ ಪುನರ್ವಸತಿ ಕಲ್ಪಿಸುವವರೆಗೆ ತೊಂದರೆ ನೀಡದೆ, ದೊಡ್ಡ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಲು ನಿರ್ದೇಶನ ನೀಡಿದರು.
ಅರಣ್ಯ ಭೂಮಿಯ ಇಂಡೀಕರಣಕ್ಕೆ ಪತ್ರ ಬರೆಯುವ ಬದಲು ಎ.ಸಿ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿದರು.
2015ರ ನಂತರದ ಒತ್ತುವರಿಯ ವಿಚಾರದಲ್ಲಿ ಶೂನ್ಯ ಸಹಿಷ್ಣತೆ ಇರಬೇಕು, ಯಾರೇ 2015ರ ನಂತರ ಅರಣ್ಯ ಒತ್ತುವರಿ ಮಾಡಿದ್ದರೆ, ಮುಲಾಜಿಲ್ಲದೆ ತೆರವು ಮಾಡಿ ಕ್ರಮ ಜರುಗಿಸಬೇಕು, ಕಳೆದ 2 ವರ್ಷದಲ್ಲಿ ಆಗಿರುವ ಒತ್ತುವರಿ, ಮಾಡಿರುವ ತೆರವು ಮತ್ತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಸಾರ್ವಜನಿಕರು ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಕಚೇರಿಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚನೆ ನೀಡಿದರು.
ಇಲ್ಲಿ ಕರ್ನಾಟಕದ ಜಿಲ್ಲಾ, ತಾಲ್ಲೂಕು ವಾರು ಪ್ರವಾಸಿ ಸ್ಥಳಗಳ ಮಾಹಿತಿ ಲಭ್ಯ | Karnataka Explore