ಬೆಂಗಳೂರು : ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆಯಲ್ಲಿ ನೊಂದ ಯುವತಿಯೊಬ್ಬಳು ಕೆಲಸ ಮಾಡುತ್ತಿದ್ದ ಜಿಮ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬಾಗಲಗುಂಟೆ ಬಳಿಯ ಗೊಲ್ಡ್ ಜಿಮ್ ನಲ್ಲಿ ರಿಸೆಪ್ಶೆನಿಸ್ಟ್ ಆಗಿ ಕೆಲಸ ಮಾಡುತ್ತಿದ್ದಳು, ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಲು ಪೋಷಕರು ನಿರಾಕರಿಸಿದ ಹಿನ್ನೆಲೆಯಲ್ಲಿ ಜಿಮ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ದಾವಣಗೆರೆ ಮೂಲದ ಶ್ರಾವಣಿ ಮನೆಯಲ್ಲಿ ನೋಡಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ.ಮದುವೆಗೆ ಒಪ್ಪದೇ ಪ್ರೀತಿಸಿದ ಯುವಕನಿಗೆ ಮೆಸೇಜ್ ಮಾಡಿ ವಿಷ ಸೇವಿಸಿದ್ದಾಳೆ. ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾಳೆ.