ಮಂಡ್ಯ: ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ.
BREAKING NEWS: ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಜೋಡಿ ಕೊಲೆ; ಗಂಡನಿಂದಲೇ ಪತ್ನಿ, ಮಗನ ಬರ್ಬರ ಹತ್ಯೆ
ಸಂಸದೆ ಸುಮಲತಾ, ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಇಂದು ಬಾಲಕಿ ಕುಟುಂಬಕ್ಕೆ ₹10 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಲಾಗಿದೆ.
ಬಾಲಕಿ ಮನೆಗೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಭೇಟಿ ನೀಡಲಿದ್ದಾರೆ.
ಅ.11 ರಂದು ಟ್ಯೂಷನ್ ಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈಯಲಾಗಿತ್ತು. ಈ ಸಂಬಂಧ ಕುಂಭಮೇಳದಲ್ಲಿ ಸಿಎಂ ಬೊಮ್ಮಾಯಿ ಮೃತ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ್ದರು. ತಕ್ಷಣವೇ ಜಿಲ್ಲಾಡಳಿತ ಖಾತೆಗೆ ಪರಿಹಾರ ನಿಧಿ ವರ್ಗಾವಣೆ ಮಾಡಲಾಗಿತ್ತು. ಇಂದು ಸಂಸದೆ ಸುಮಲತಾ ಹಾಗೂ ಸಚಿವ ಕೆ.ಗೋಪಾಲಯ್ಯ ನೇತೃತ್ವದಲ್ಲಿ ಚೆಕ್ ಹಸ್ತಾಂತರಿಸಲಾಗುತ್ತೆ.