Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ತೀವ್ರ ಬಿಸಿಗಾಳಿ: ಮುನ್ನೆಚ್ಚರಿಕೆ ವಹಿಸುವಂತೆ ಪ್ರಧಾನಿ ಮೋದಿ ಕರೆ | Heat Wave

‘ನನಗೆ ಮಧ್ಯಂತರ ಚುನಾವಣೆಗಳ ಚಿಂತೆಯಿಲ್ಲ’: ಇರಾನ್‌ನೊಂದಿಗೆ ಒಪ್ಪಂದಕ್ಕೆ ಟ್ರಂಪ್ ಪಟ್ಟು

ಇಸ್ರೇಲ್ ಕಾರ್ಯಾಚರಣೆ: ಗಾಜಾದಲ್ಲಿ ಹಮಾಸ್‌ನ ಇಬ್ಬರು ಉನ್ನತ ಕಮಾಂಡರ್‌ಗಳ ಹತ್ಯೆ | Israel- Hamas War

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ NRIಗಳಿಗೆ ಶೇ.15ರಷ್ಟು ಕೋಟಾ ನೀಡಿ: ಕೇಂದ್ರಕ್ಕೆ ಸಚಿವ ಎಸ್ಎಸ್ ಪಾಟೀಲ್ ಪತ್ರ
KARNATAKA

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ NRIಗಳಿಗೆ ಶೇ.15ರಷ್ಟು ಕೋಟಾ ನೀಡಿ: ಕೇಂದ್ರಕ್ಕೆ ಸಚಿವ ಎಸ್ಎಸ್ ಪಾಟೀಲ್ ಪತ್ರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಅನಿವಾಸಿ ಭಾರತೀಯ (NRI) ಕೋಟಾ ಆರಂಭಿಸಲು ಸೂಪರ್ ನ್ಯೂಮರರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆ ಪತ್ರ ಬರೆದಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‍ಎಂಸಿ) ಅಧ್ಯಕ್ಷರಿಗೆ ಈಕುರಿತು ಪತ್ರ ಬರೆದಿದ್ದು, ರಾಜ್ಯದಲ್ಲಿರುವ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ 508 ಹೆಚ್ಚುವರಿ ಸೂಪರ್ ನ್ಯೂಮರರಿ (supernumerary) ಎಂಬಿಬಿಎಸ್ ಸೀಟುಗಳನ್ನು ಸೃಷ್ಟಿಸುವ ಮೂಲಕ ಶೇ 15ರಷ್ಟು ಎನ್ಆರ್ ಐ ಕೋಟಾ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಯುಜಿ-ಎಂಬಿಬಿಎಸ್ ವಾರ್ಷಿಕ ಮಂಜೂರಾದ ಸೀಟುಗಳ ಮೇಲೆ ಹೆಚ್ಚುವರಿ ಸೀಟುಗಳನ್ನು ರಚಿಸುವುದು ಸೂಪರ್ ನ್ಯೂಮರರಿ
ಉದ್ದೇಶವಾಗಿದೆ. ಪ್ರಸ್ತಕ ವೈದ್ಯಕೀಯ ಶಿಕ್ಷಣಇಲಾಖೆಯಡಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳು 2023-24ನೇ ಸಾಲಿನಲ್ಲಿ 3,450 ಸೀಟುಗಳ ಸಾಮಥ್ರ್ಯವನ್ನು ಹೊಂದಿದ್ದು ಅದರಲ್ಲಿ 85% (2929 ಸೀಟುಗಳು) ಕರ್ನಾಟಕ ಕೋಟಾ ಮತ್ತು 521 ಅಂದರೆ15% ಅಖಿಲ ಭಾರತ ಕೋಟಾ ಆಗಿದೆ.

ಈಗಾಗಲೇ ರಾಜಸ್ಥಾನ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಪುದುಚೇರಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.7-15ರಷ್ಟು ಎನ್ ಆರ್ ಐ ಕೋಟಾವನ್ನು ನೀಡಿರುವ, ನಿದರ್ಶನಗಳನ್ನು ಹಾಗು ಈ ರಾಜ್ಯಗಳು ಎನ್ ಆರ್ ಐ ವಿದ್ಯಾರ್ಥಿಗಳಿಗೆ ವಾರ್ಷಿಕ 75,000 ಡಾಲರ್ ದಿಂದ 100,000 ಡಾಲರ್ ಗಿಂತ ಹೆಚ್ಚು ಶುಲ್ಕ ವಿಧಿಸಿರುವುದ್ದನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬಜೆಟ್ ಹಂಚಿಕೆ, ವಿದ್ಯಾರ್ಥಿಗಳ ಶುಲ್ಕ, ಕೇಂದ್ರ ಮತ್ತು ರಾಜ್ಯಅನುದಾನಗಳು ಮತ್ತು ಇತರ ದೇಣಿಗೆಗಳ ಹೊರತಾಗಿಯೂ ರಾಜ್ಯದ ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳು ಹಣದ ಕೊರತೆಯನ್ನು ಎದುರಿಸುತ್ತಿವೆ ಎಂದು ಪಾಟೀಲ್ ಪತ್ರದಲ್ಲಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಎನ್ ಆರ್ ಐ ಕೋಟಾ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಮಾತ್ರ ಅನುಮತಿಯಿದ್ದು, ಪ್ರತಿ ವಿದ್ಯಾರ್ಥಿ ವಾರ್ಷಿಕ 1 ಕೋಟಿ ರೂ ಯಿಂದ 2.5 ಕೋಟಿ ರೂ. ಕೋರ್ಸ್ ಶುಲ್ಕ ಪಾವತಿಸಬೇಕಾಗುತ್ತದೆ. ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ ಎನ್ ಆರ್ ಐ ಕೋಟಾ ಜಾರಿಯಾದಲ್ಲಿ ವಿದ್ಯಾರ್ಥಿಗೆ ವಾರ್ಷಿಕ ರೂ. 25 ಲಕ್ಷ ಶುಲ್ಕ ನಿಗದಿಪಡಿಸಬಹುದು, ಇದು ವೈದ್ಯಕೀಯ ಶಿಕ್ಷಣ ಇಲಾಖೆಗೆ ಮೊದಲ ವರ್ಷಕ್ಕೆ 127 ಕೋಟಿ ರೂ ಮತ್ತು 5ನೇ ವರ್ಷಕ್ಕೆ 571.5 ಕೋಟಿ ರೂ. ಸಂದಾಯವಾಗುತ್ತದೆ. ಈ ಸಂಸ್ಥೆಗಳನ್ನು ಶ್ರೇಷ್ಠತೆಯ ಕೇಂದ್ರವನ್ನಾಗಿ ಮಾಡಲು, ಗುಣಮಟ್ಟದ ಶಿಕ್ಷಣ, ತರಬೇತಿ, ನಿರ್ವಹಣೆ, ವೈದ್ಯಕೀಯ ಉಪಕರಣಗಳು, ಔಷಧಗಳ ಖರೀದಿ, ರೋಗಿಗಳ ಹೊರೆ ನಿರ್ವಹಣೆ, ಮೂಲಸೌಕರ್ಯ ಸುಧಾರಣೆ, ಅಧ್ಯಾಪಕರ ಸಾಮರ್ಥ್ಯ ಮತ್ತು ಸಂಶೋಧನೆಗೆ ಎನ್‌ಆರ್‌ಐ ಕೋಟಾದ ಮೂಲಕ ಹೆಚ್ಚುವರಿ ಹಣದ ಅಗತ್ಯವಿದೆ ಎಂದು ಸಚಿವರು ಪ್ರತಿಪಾದಿಸಿದ್ದಾರೆ.

ಲಭ್ಯವಿರುವ ವಾರ್ಷಿಕ ಸೀಟುಗಳ ಒಳಗೆ ಎನ್ ಆರ್ ಐ ಕೋಟಾವನ್ನು ರಚಿಸುವುದು ಕಾರ್ಯಸಾಧ್ಯವಲ್ಲ. ಹಾಗೆ ಮಾಡಿದರೆ ಬಡವರು ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಕಡಿಮೆ ಸೀಟು ಸೃಷ್ಟಿಯಾಗುತ್ತವೆ. ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ನಾವು ವಿರೋಧ ಎದುರಿಸಬೇಕಾಗುತ್ತದೆ ಎಂದು ಪಾಟೀಲ್ ಆತಂಕ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿರುವ ಸರ್ಕಾರಿ ಪಶು ವೈದ್ಯಕೀಯ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು 15% ಎನ್ ಆರ್ ಐ ಕೋಟಾವನ್ನುಹೊಂದಿವೆ. ಎನ್ ಆರ್ ಐ ಕೋಟಾದಿಂದ ಈ ವಿಶ್ವವಿದ್ಯಾಲಯಗಳು ಉತ್ತಮ ಸೌಲಭ್ಯಗಳು ಮತ್ತು ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಸಹಾಯ ಮಾಡುತ್ತವೆ ಎಂದು ಯುಜಿಸಿ ಅಧ್ಯಕ್ಷರಿಗೆ ಸಚಿವರು ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

2025-26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 15% ಎನ್ ಆರ್ ಐ ಕೋಟಾವನ್ನು ಪ್ರಾರಂಭಿಸಲು ರಾಜ್ಯದ ಪ್ರಸ್ತಾವನೆಗೆ ಅನುಮತಿ ಸಿಗುತ್ತದೆ ಎಂಬ ಭರವಸೆಯನ್ನು ಶರಣಪ್ರಕಾಶ್ ಪಾಟೀಲ್ ವ್ಯಕ್ತಪಡಿಸಿದ್ದಾರೆ.

BREAKING: ‘ಮಾಜಿ ಸಿಎಂ ವೀರಪ್ಪ ಮೊಯ್ಲಿ’ ಪುತ್ರಿ ‘ಹಂಸಾ ಮೊಯ್ಲಿ’ ವಿಧಿವಶ | Hamsa Moily No More

ನನ್ನ ಎದುರಲ್ಲೇ ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ಮಾಡಿದ : ದಾಸನ ವಿರುದ್ಧವೆ ಹೇಳಿಕೆ ನೀಡಿದ ಪವಿತ್ರಾಗೌಡ!

Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಭಾರತದಲ್ಲಿ ತೀವ್ರ ಬಿಸಿಗಾಳಿ: ಮುನ್ನೆಚ್ಚರಿಕೆ ವಹಿಸುವಂತೆ ಪ್ರಧಾನಿ ಮೋದಿ ಕರೆ | Heat Wave

‘ನನಗೆ ಮಧ್ಯಂತರ ಚುನಾವಣೆಗಳ ಚಿಂತೆಯಿಲ್ಲ’: ಇರಾನ್‌ನೊಂದಿಗೆ ಒಪ್ಪಂದಕ್ಕೆ ಟ್ರಂಪ್ ಪಟ್ಟು

ಇಸ್ರೇಲ್ ಕಾರ್ಯಾಚರಣೆ: ಗಾಜಾದಲ್ಲಿ ಹಮಾಸ್‌ನ ಇಬ್ಬರು ಉನ್ನತ ಕಮಾಂಡರ್‌ಗಳ ಹತ್ಯೆ | Israel- Hamas War

ಸಂಪೂರ್ಣ ಸಾಕ್ಷರತೆ ಸಾಧಿಸಿದ ಸಿಕ್ಕಿಂ: ರಾಷ್ಟ್ರಪತಿ ಮುರ್ಮು ಸಮ್ಮುಖದಲ್ಲಿ ಘೋಷಣೆ

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.