ನವದೆಹಲಿ: 1990 ರ ದಶಕದಲ್ಲಿ ರಾಮ ಜನ್ಮಭೂಮಿ ಚಳವಳಿಯ ನೇತೃತ್ವ ವಹಿಸಿದ್ದ ಹಿರಿಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ ಘೋಷಿಸಿದ್ದಾರೆ.
ಈ ನಡುವೆ ನಡೆದಾಡುವ ದೇವರು, ತ್ರಿವಿಧದಾಸೋಹಿ ಪರಮಪೂಜ್ಯ ಸಿದ್ದಗಂಗಾ ಶ್ರೀಗಳಿಗೆ ಕೂಡ ಭಾರತ ರತ್ನ ನೀಡುವಂತೆ ರಾಜ್ಯದಲ್ಲಿ ಹಲವು ಮಂದಿ ಶ್ರೀಗಳ ಭಕ್ತರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಶ್ರೀಗಳಿಗೆ ಮರಣೋತ್ತರ ಭಾರತ ರತ್ನ ನೀಡುವಂತೆ ರಾಜ್ಯದ ಕೋಟ್ಯಾಂತರ ಮಂದಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ಅಢ್ವಾಣಿ ಅವರಿಗೆ ಭಾರತ ರತ್ನ ನೀಡಿದ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ನಾವು ಕೂಡ ಸಿದ್ದಗಂಗೆಯ ಶ್ರೀ ಶಿವಕುಮಾರ ಸ್ವಾಮಿಗಳಿಗೆ ಭಾರತ ರತ್ನ ನೀಡುವಂತೆ ಮನವಿ ಮಾಡಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಅಂತ ಹೇಳಿದರು.