ಶಿವಮೊಗ್ಗ: ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಅವರಲ್ಲಿ ನಿಯೋಗ ಮನವಿ ಮಾಡಿದೆ.
ನಿಯೋಗದ ಪರವಾಗಿ ಮಾತನಾಡಿದ ಹೊಸನಗರ ತಾಲೂಕ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರಂ ಕಲಗೋಡು ರತ್ನಾಕರ್ ಕಾಂಗ್ರೆಸ್ ಪಕ್ಷದ ಚಿಹ್ನೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನಿಂದ ನಿಂದ ಜಿಪಂ ಅಧ್ಯಕ್ಷ ಗಾದಿಗೆ ಏರುವ ಮೂಲಕ ಹೊಸನಗರ ತಾಲೂಕಿನಲ್ಲಿ ಪಕ್ಷವನ್ನು ಸಂಘಟಿಸಿದ್ದಾರೆ. ಅವರ ಪಕ್ಷ ನಿಷ್ಠೆ ಹಾಗೂ ಕ್ರೀಯಾಶೀಲತೆಯನ್ನು ಪಕ್ಷದ ಹೈಕಮಾಂಡ್ ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ನಮ್ಮೆಲ್ಲರ ಹೆಬ್ಬಯಕೆಯಾಗಿದೆ. ಈ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಹಾಗೂ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ನೀಡಲಿ ಎಂದು ಒತ್ತಾಯಿಸಿದರು.
ನಂತರ ನಿಯೋಗವನ್ನುದ್ದೇಶಿಸಿ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ನಾವು ಕಲಗೋಡು ರತ್ನಾಕರ್ ಸಹೋದರರಂತೆ ಇದ್ದೇವೆ. ರತ್ನಾಕರ್ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಈ ಹಿಂದೆಯೇ ನಾನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮೌಖಿಕವಾಗಿ ಹಾಗೂ ಪತ್ರದ ಮೂಲಕ ಮನವಿ ಸಲ್ಲಿಸಿದ್ದೇವು. ಆದರೆ ಕೆಲವು ಕಾರಣಗಳಿಂದಾಗಿ ಇದು ಈವರೆಗೆ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಶಾಸಕನಾಗಿ ಹಾಗೂ ಕ್ಷೇತ್ರದ ಕಾಂಗ್ರೆಸ್ ಅಕ್ಷದ್ ಕಾರ್ಯಕರ್ತನಾಗಿ ಕಲಗೋಡು ರತ್ನಾಕರ್ ಅವರಿಗೆ ಸೂಕ್ತ ಸ್ಥಾನ ದೊರಕಿಸಿ ಕೊಡಲು ಸಂಪೂರ್ಣ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಉಬೇದುಲ್ಲಾ ಶರೀಫ್, ಬೆಳ್ಳೂರು ಯೋಗೇಶ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರ, ಕೆಡಿಪಿ ಸದಸ್ಯ ಆಸೀಫ಼್ ಭಾಷಾ, ಜೇನಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜು, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ, ಸದಸ್ಯ ನಿರೂಪ್ ಕುಮಾರ್, ಶಾಸಕರ ಆಪ್ತ ಸಹಾಯಕ ಸಣ್ಣಕ್ಕಿ ಮಂಜು, ಚಿಕ್ಕಜೀನಿ ವೆಂಕಟಚಲ, ಜೇನಿ ಗ್ರಾಮ ಪಂಚಾಯಿತಿ ಸದಸ್ಯ ಟೀಕಪ್ಪ, ಲಕ್ಷ್ಮಣ ಹಾರೋಹಿತ್ತಲು, ಈಶ್ವರಪ್ಪ ಗೌಡ್ರು, ಹೆಬ್ಬಯ್ಲು ನಾಗರಾಜ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಜನರ ಪಾಲಿಗೆ ಸಂಜೀವಿನಿ ಆಗುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು: ಶಾಸಕ ಕೆ.ಎಂ.ಉದಯ್
SHOCKING : ನಾಯಿಗೆ ಮುದ್ದು ಮಾಡುವ ನೆಪದಲ್ಲಿ, ಯುವತಿಯ ಮೈ-ಕೈ ಮುಟ್ಟಿ ‘ಲೈಂಗಿಕ ಕಿರುಕುಳ’ ನೀಡಿದ ಕಾಮುಕ!
ಈ ಹಂತ ಅನುಸರಿಸಿ, ಮನೆಯಲ್ಲೇ ‘ಬಕೆಟ್’ನಲ್ಲಿ ‘ಅಣಬೆ’ ಬೆಳೆಯಿರಿ | Mushrooms








