ಬೆಳಗಾವಿ: ನಮಗೆ ನೀರು ಕೊಡಿ ಇಲ್ಲವಾದ್ರೆ ಕರ್ನಾಟಕಕ್ಕೆ ಹೋಗ್ತೇವೆ ಎಂದು ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಉಮದಿ ಗ್ರಾಮದ ಜನ ಆಕ್ರೋಶ ಹೊರಹಾಕಿದ್ದಾರೆ. ಜತ್ತ ತಾಲೂಕು ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಜತ್ತ ತಾಲೂಕಿನ 42 ಹಳ್ಳಿಗಳ ಜನರು ಉಮದಿ ಗ್ರಾಮದಲ್ಲಿ ಸಭೆ ಸೇರಿದ್ದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
BIGG NEWS: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಜನರ ಸುಲಿಗೆ: ಬಳ್ಳಾರಿಯಲ್ಲಿ ಇಬ್ಬರು ಆರೋಪಿಗಳ ಬಂಧನ
ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ, ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಯಾಗಿದೆ. ಮತ್ತೊಂದೆಡೆ ಗಡಿವಿವಾದ ಬೆನ್ನಲ್ಲೇ ಜತ್ತ ತಾಲೂಕು ನೀರಾವರಿ ಸಂಘರ್ಷ ಸಮಿತಿ ಹೋರಾಟ ಮತ್ತೆ ಮುನ್ನಲೆಗೆ ಬಂದಿದೆ. ಉಮದಿ ಗ್ರಾಮದಲ್ಲಿ ನಿನ್ನೆ ತಡರಾತ್ರಿವರೆಗೂ ಜತ್ತ ತಾಲೂಕು ನೀರಾವರಿ ಸಂಘರ್ಷ ಸಮಿತಿ ಸಭೆ ನಡೆದಿದ್ದು 6 ದಶಕಗಳಿಂದ ನೀರಿನ ಸಮಸ್ಯೆಯಿಂದ ಕಂಗೆಟ್ಟಿರುವ ಜತ್ತ ತಾಲೂಕಿನ 42 ಹಳ್ಳಿಗಳ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಸಭೆ ಬಳಿಕ ಹೋರಾಟಗಾರರು ಮಹಾರಾಷ್ಟ್ರ ಸರ್ಕಾರಕ್ಕೆ ಎಂಟು ದಿನಗಳ ಗಡುವು ನೀಡಿದ್ದಾರೆ.