ಉಡುಪಿ : ರಾಜ್ಯದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿನಿಗೆ ಅಂದಿನ ಸ್ಥಳೀಯ ಶಾಸಕ ರಘುಪತಿ ಭಟ್ ಅವರು ವಿರೋಧಿಸಿ ಅವಕಾಶ ಕೊಡದೇ ಪರೀಕ್ಷೆ ಬರೆಯುವುದರಿಂದ ಉಚ್ಛಾಟನೆ ಮಾಡಿದ್ದರು.
ಇದಕ್ಕೆ ಎರಡು ವರ್ಷಗಳ ಬಳಿಕ ವಿದ್ಯಾರ್ಥಿನಿ ಅಲಿಯಾ ಅಸಾದಿ ‘ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ ಇತ್ತು. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ’ ಎಂದು ತಿರುಗೇಟು ಕೊಟ್ಟಿದ್ದಾಳೆ.
ಟ್ವೀಟ್ ನಲ್ಲಿ ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ. ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು.
ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ, ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು ಎಂದು ತಿರುಗೇಟು ನೀಡಿದ್ದಾಳೆ.
ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು.
ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ, ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು.(1/n)
— Aliya Assadi (@Aliyassadi) May 28, 2024