ತುಮಕೂರು : ಶಿವಮೊಗ್ಗ ಜಿಲ್ಲೆಯಲ್ಲಿ ಸಾವರ್ಕರ್ ಪ್ಲೆಕ್ಸ್ ವಿವಾದ ಹಿನ್ನೆಲೆ ಯುವನೊಬ್ಬನಿಗೆ ಚಾಕು ಇರಿದ ಪ್ರಕರಣ ಬೆನ್ನಲ್ಲೇ ತುಮಕೂರಿನ ದಂಡಿನ ಮಾರಮ್ಮ ದೇವಸ್ಥಾನದ ಬಳಿ ಸ್ವಾತಂತ್ರ್ಯ ಹೋರಾಟಗಾರರ ಜೊತೆ ಗೋಡ್ಸೆ ಪ್ಲೆಕ್ಸ್ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಬೆಳಕಿಗೆ ಬಂದಿದೆ.
ಕಿಡಿಗೇಡಿಗಳು ಕೃತ್ಯ ಬಹಿರಂಗವಾಗುತ್ತಿದ್ದಂತೆ ಘಟನಾಸ್ಥಳಕ್ಕೆ ಮಧುಗಿರಿ ಪುರಸಭೆ ಅಧಿಕಾರಿಗಳು ಭೇಟಿ ನೀಡಿ ವಿವಾದಿತ ಪ್ಲೆಕ್ಸ್ ತೆರವು ಮಾಡಲಾಗಿದೆ. ವಿವಾದ ಸೃಷ್ಠಿಯಾಗದಂತೆ ಭಾರೀ ಎಚ್ಚರಿಕೆ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.