ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಅಕ್ರಮವಾಗಿ ಹಣ ಮಧ್ಯ ಚಿನ್ನ ಸಾಗಾಟ ನಡೆಸುತ್ತಿದ್ದು ಅಂತವರ ಮೇಲೆ ಪೊಲೀಸರು ಅಕನಿಟ್ಟಿದ್ದು ಇದೀಗ ರಾಮನಗರ ಹಾಗೂ ದಾವಣಗೆರೆಯಲ್ಲಿ ಒಟ್ಟು 22 ಕೋಟಿ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರವನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಾಮನಗರ ತಾಲೂಕಿನ ಬಿಡದಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ವಾಹನವನ್ನು ಬಿಡದಿ ಬಳಿಯ ಹೆಜ್ಜಾಲ ಟೋಲ್ ಬಳಿ ಪೊಲೀಸರು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.
ಅಲ್ಲದೆ ದಾವಣಗೆರೆಯ ಲೋಕಿಕೆರೆ ಚೆಕ್ಪೋಸ್ಟ್ ಮೂಲಕ ದಾಖಲೆ ಇಲ್ಲದೆ ಸಾಗಿಸಲು ಯತ್ನಿಸಿದ 12.50 ಕೋಟಿ ರೂ. ಮೌಲ್ಯದ ಚಿನ್ನ, ವಜ್ರವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿದೆ. ಈ ಚಿನ್ನ ಮತ್ತು ವಜ್ರವನ್ನು ವಿವಿಧ ಆಭರಣ ಅಂಗಡಿಗಳಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿಬಂದಿದೆ. ಚಿನ್ನ ಮತ್ತು ವಜ್ರ ಸಾಗಣೆಗೆ ಸೂಕ್ತ ದಾಖಲೆ ಇಲ್ಲದ ಹಿನ್ನೆಲೆಯಲ್ಲಿ ವಶಪಡಿಸಿಕೊಳ್ಳಲಾಗಿದೆ.