ಬೆಂಗಳೂರು : ಡಿಕೆ ಸಹೋದರಿ ಎಂದು ಹೇಳಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯ ಗೌಡಳನ್ನು 14 ದಿನ ಜಾರಿ ನಿರ್ದೇಶನಾಲಯ (ED) ಕಸ್ಟಡಿಗೆ ನೀಡಿ ಇದೀಗ ಕೋರ್ಟ್ ಆದೇಶ ಹೊರಡಿಸಿದೆ.
ಹೌದು 9.82 ಕೋಟಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೂ ತಪಾಸಣೆ ನಡೆಸಿದರು. ನಡೆಸಿದರು. ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ, ಫೋನ್ ಕರೆ ವಿವರಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಬಳಿಕ ಪ್ರಕರಣದ ಪ್ರಮುಖ ಆರೋಪಿ ಐಶ್ವರ್ಯ ಗೌಡ ಅವರ ಆರ್.ಎಂ.ಸಿ. ಯಾರ್ಡ್ನಲ್ಲಿರುವ ನಿವಾಸದ ಮೇಲೆಯೂ ದಾಳಿ ನಡೆಸಿ, ನಿನ್ನೆ ಸಂಜೆವರೆಗೂ ಪರಿಶೀಲಿಸಿದರು. ಬಳಿಕ ಐಶ್ವರ್ಯಳನ್ನು ವಶಕ್ಕೆ ಪಡೆದು ಶಾಂತಿನಗರ ಇ.ಡಿ. ಕಚೇರಿಗೆ ಅಧಿಕಾರಿಗಳು ಕರೆತಂದು ಜಡ್ಜ್ ಮುಂದೆ ಹಾಜರುಪಡಿಸಿದ್ದರು ಇದೀಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಐಶ್ವರ್ಯ ಗೌಡಳನ್ನು 14 ದಿನ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.