ಬೆಂಗಳೂರು: ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೆ ಬಿಗ್ ಶಾಕ್ ನೀಡಲಾಗಿದೆ. ಡಿಆರ್ ಐನಿಂದ 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನಲೆಯಲ್ಲಿ ನಟಿ ರನ್ಯಾ ರಾವ್ ಗೆ ಬರೋಬ್ಬರಿ 102 ಕೋಟಿ ರೂಪಾಯಿ ದಂಡವನ್ನು ವಿಧಿಸಲಾಗಿದೆ.
ಸ್ಯಾಂಡಲ್ ವುಟ್ ನಟಿ ರನ್ಯಾ ರಾವ್ ಗೆ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡಿ ಆರ್ ಐ ಬಿಗ್ ಶಾಕ್ ನೀಡಲಾಗಿದೆ. 127 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ್ದು ಸಾಬೀತಾದ ಹಿನ್ನಲೆಯಲ್ಲಿ 102 ಕೋಟಿ ರೂಪಾಯಿ ದಂಡ ಪಾವತಿ ಮಾಡುವಂತೆ ನಟಿ ರನ್ಯಾ ರಾವ್ ಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳಇಗೆ ಡಿ ಆರ್ ಐ ಶೋಕಾಸ್ ನೋಟಿಸ್ ನೀಡಿದೆ. ಈಗಾಗಲೇ ಇಡಿ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 37 ಕೋಟಿಯಷ್ಟು ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಈ ಬೆನ್ನಲ್ಲೇ ನಟಿ ರನ್ಯಾ ರಾವ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
BREAKING: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: ಮೃತಪಟ್ಟವರ ಸಂಖ್ಯೆ 1,124ಕ್ಕೆ ಏರಿಕೆ | Afghanistan Earthquake