ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರೀಗ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ನಿನ್ನೆಯಷ್ಟೇ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ನ್ಯಾಯಾಯಲಯು ವಜಾಗೊಳಿಸಿತ್ತು. ಹೀಗಾಗಿ ನಟಿ ರನ್ಯಾ ರಾವ್ ಅವರು ಸೆಷನ್ಸ್ ಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ನಟಿ ರನ್ಯಾ ರಾವ್ ಅವರು ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನವಾಗಿ, ಜೈಲುಪಾಲಾಗಿದ್ದಾರೆ. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನಲೆಯಲ್ಲಿ ಅವರ ಪರ ವಕೀಲರು ಈಗ ಸೆಷನ್ಸ್ ಕೋರ್ಟ್ ಗೆ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಸೆಷನ್ಸ್ ಕೋರ್ಟ್ ಗೆ ಅರ್ಜಿಯನ್ನು ನಟಿ ರನ್ಯಾ ರಾವ್ ಪರ ವಕೀಲರು ಸಲ್ಲಿಸಿದ್ದು, ಸೋಮವಾರದಂದು ಅರ್ಜಿಯು ವಿಚಾರಣೆಗೆ ಬರುವ ಸಾಧ್ಯತೆ ಇದೆ. ಅಂದು ಯಾವ ತೀರ್ಪನ್ನು ಕೋರ್ಟ್ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
BREAKING : ಆಂಧ್ರದಲ್ಲಿ ಘೋರ ಘಟನೆ : ಶಾಲೆ ಫೀಸ್ ಕಟ್ಟೋಕೆ ಆಗದೆ, ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ!
BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!