ಬೆಂಗಳೂರು: ನಟಿ ರನ್ಯಾ ರಾವ್ ಅವರು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿ ಬಿದ್ದು ಜೈಲುಪಾಲಾಗಿದ್ದಾರೆ. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿಕೆ ಮಾಡಿ, ಮತ್ತೆ ಶಾಕ್ ನೀಡಿದೆ.
ಇಂದು ನಟಿ ರನ್ಯಾ ರಾವ್ ಅವರು ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ 64ನೇ ಸೆಷನ್ಸ್ ನ್ಯಾಯಾಲಯವು ವಿಚಾರಣೆ ನಡೆಸಿತು. ಈ ಅರ್ಜಿಯನ್ನು ಮಾರ್ಚ್.24ಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ.
ಅಂದಹಾಗೇ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಸಿಕ್ಕಿ ಬಿದ್ದು ಜೈಲುಪಾಲಾಗಿದ್ದಾರೆ. ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದೇ ಕೇಸಲ್ಲಿ ತರುಣ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು.
ಭಾರತದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 99 ಲಕ್ಷಕ್ಕೂ ಹೆಚ್ಚು ‘ವಾಟ್ಸ್ ಆಪ್’ ಖಾತೆ ಬ್ಯಾನ್
ನಾಗ್ಪುರ ಹಿಂಸಾಚಾರ: ಮತ್ತೆ 14 ಮಂದಿ ಬಂಧನ, ಬಂಧಿತರ ಸಂಖ್ಯೆ 105ಕ್ಕೆ ಏರಿಕೆ, 3 ಹೊಸ FIR ದಾಖಲು | Nagpur violence