ಬೆಂಗಳೂರು : ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾರಾವ್ ಅವರಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನಿನ್ನೆ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಬಳಿಕ ಇಂದು ರನ್ಯಾ ರಾವ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇಂದು ಮತ್ತೆ ವಿಚಾರಣೆ ನಡೆಯಲಿದೆ. ಅದಕ್ಕೂ ಮುನ್ನ ನಿನ್ನೆ ನಟಿ ರನ್ಯಾ ರಾವ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೌದು ರನ್ಯಾ ರಾವ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಬೆಂಗಳೂರಿನ ನಿವಾಸದ ಮೇಲೆ ನಿನ್ನೆ ಸಂಜೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ನಿನ್ನೆ ದಾಳಿ ನಡೆಸಿ 1 ಗಂಟೆ ಪರಿಶೀಲನೆ ನಡೆಸಿದ ಇಬ್ಬರು ಅಧಿಕಾರಿಗಳು ಸಂಜೆ 4 ಗಂಟೆಯಿಂದ 5 ಗಂಟೆಯವರೆಗೆ ರನ್ಯ ರಾವ್ ನಿವಾಸದಲ್ಲಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ 5ನೇ ಕ್ರಾಸ್ ನಲ್ಲಿರುವ ನಂದವಾಣಿ ಮ್ಯಾನ್ಶನ್ 3ನೇ ಅಂತಸ್ತಿನಲ್ಲಿರೋ ಫ್ಲಾಟ್ ನಲ್ಲಿ ನಿನ್ನೆ ಇಬ್ಬರು CBI ಅಧಿಕಾರಿಗಳು ದಾಳಿ ನಡೆಸಿದ್ದು ಸುಮಾರು 1 ಗಂಟೆಗಳ ಕಾಲ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಏನಾದರೂ ದಾಖಲೆಗಳು ಇರಬಹುದಾ ಎನ್ನುವ ಸಂಖ್ಯೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.