ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚೆನ್ನಾಗಾಟ ಪ್ರಕರಣದಲ್ಲಿ ನಟಿ ರನ್ಯರಾವ್ ಅವರ ಬಂಧನವಾಗಿದ್ದು ಈಗಾಗಲೇ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾಗಿದೆ. ಆದರೆ ಈ ಪ್ರಕರಣದಲ್ಲಿ ಅವರ ಸ್ನೇಹಿತನಾದ ಉದ್ಯಮಿಯ ಪುತ್ರ A2 ಆರೋಪಿ ತರುಣ್ ರಾಜು ಅವರು ಸಹ ಅರೆಸ್ಟ್ ಆಗಿದ್ದು, ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ನಿನ್ನೆ ಆದೇಶ ನೀಡಿತ್ತು.
ಬಳಿಕ ತರುಣ್ ರಾಜು ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ತರುಣ್ ರಾಜು ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ತರುಣ್ ರಾಜು ಜಾಮೀನು ಅರ್ಜಿ ವಿಚಾರಣೆ ಇದೀಗ ಸೋಮವಾರಕ್ಕೆ ಮುಂದೂಡಿಕೆ ಆಗಿದೆ.ಈ ಕುರಿತು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ.