ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ಬಂಧಿಸಲ್ಪಟ್ಟಿರುವ ನಟಿ ರನ್ಯಾ ರಾವ್ ಅವರ ಮನೆಯಲ್ಲಿಯೂ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಸೋಮವಾರ ರಾತ್ರಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆದ ಬಳಿಕ ಅವರು ವಾಸವಿದ್ದ ನಗರದ ಲ್ಯಾವೆಲ್ಲೆ ರಸ್ತೆಯಲ್ಲಿರುವ ಫ್ಲ್ಯಾಟ್‌ನಲ್ಲಿ ಡಿಆರ್ಐ ಅಧಿಕಾರಿಗಳ ತಂಡ ಶೋಧ ನಡೆಸಿದ್ದು, ಈ ವೇಳೆ 2.06 ಕೋಟಿ ರೂ. ಮೌಲ್ಯದ ಚಿನ್ನ ಹಾಗೂ 2.67 ಕೋಟಿ ರೂ. ನಗದು ಸೇರಿದಂತೆ ಕೆಲ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ರನ್ಯಾ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ರನ್ಯಾ ಬಂಧನ ಬಳಿಕ ಆಕೆ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್ ನಲ್ಲಿರುವ ಫ್ಲಾಟ್ ಅನ್ನು ಅಧಿಕಾರಿಗಳ. ಪರಿಶೀಲನೇ ನಡೆಸಿದ್ದಾರೆ ಮೊನ್ನೆ ಸಹ ರಾತ್ರಿ ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 3 ದೊಡ್ಡ ಪೆಟ್ಟಿಗೆಯನ್ನು ಅಧಿಕಾರಿಗಳು ತೆಗೆದುಕೊಂಡು ಹೋದರು ಎಂದು ತಿಳಿದುಬಂದಿದೆ.
ಪ್ರಕರಣ ಹಿನ್ನೆಲೆ?
ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ನಟಿ ರನ್ಯಾ ರಾವ್ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಸೋಮವಾರ ರಾತ್ರಿ ಎಮಿರೇಟ್ಸ್ ಏರ್‌ಲೈನ್ಸ್ ಮೂಲಕ ದುಬೈನಿಂದ ಬೆಂಗಳೂರಿಗೆ ಬಂದಿಳಿದ ರನ್ಯಾ ರಾವ್ ಅವರನ್ನು 14.8 ಕೆ.ಜಿ ಚಿನ್ನದ ಸಮೇತ ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ಬಳಿಕ ವೈದ್ಯಕೀಯ ತಪಾಸಣೆಗೊಳಪಡಿಸಿ ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸದ ಮುಂದೆ ರನ್ಯಾ ರಾವ್ ಅವರನ್ನು ಹಾಜರುಪಡಿಸಲಾಗಿತ್ತು. ಮಾರ್ಚ್ 18ರ ವರೆಗೂ ರನ್ಯಾ ರಾವ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದರು.