ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪರಿಶೀಲನೆಯ ವೇಳೆ ವಿದೇಶದಿಂದ ಆಗಮಿಸಿದ ಇಬ್ಬರು ಮಹಿಳೆಯರು ಸಿಗಿ ಬಿದ್ದಿದ್ದು, ಅವರ ಬಳಿ ಇದ್ದ ಸುಮಾರು 6.29 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಹೌದು ಕೆಂಪೇಗೌಡ ಏರ್ಪೋರ್ಟ್ ನಲ್ಲಿ 6.29 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬಳಿಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ವಿದೇಶದಿಂದ ಫ್ಲೈಟ್ ನಲ್ಲಿ ಮಹಿಳೆಯರು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು.ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಇಬ್ಬರು ಮಹಿಳೆಯರು ಬಂದು ಇಳಿದಿದ್ದಾರೆ.
ನಾಜಿ ಲಿಟಿ ಎಂಬ ಮಹಿಳೆಯಿಂದ 4 ಕೆ.ಜಿ 61 ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೆ ಆರತಿ ಸಗಲ್ ಎಂಬುವವರಿಂದ 2 ಕೆ.ಜಿ 181 ಚಿನ್ನ ಗ್ರಾಂ ವಶಪಡಿಸಿಕೊಂಡಿದ್ದಾರೆ. ಏರ್ ಪೋರ್ಟ್ ನ ಶೌಚಾಲಯದಲ್ಲೂ 2 ಕೆ.ಜಿ 772 ಗ್ರಾಂ ಚಿನ್ನ ಪತ್ತೆಯಾಗಿದೆ. ಬ್ಯಾಗ್ ನಿಂದ ಇಬ್ಬರು ಮಹಿಳೆಯರು ಬೆಂಗಳೂರಿಗೆ ಬಂದಾಗ ಕಸ್ಟಮ್ಸ್ ಅಧಿಕಾರಿಗಳಿಂದ ಪರಿಶೀಲನೆ ವೇಳೆ ಬ್ಯಾಗ್ ನಲ್ಲಿ ಚಿನ್ನ ಪತ್ತೆಯಾಗಿದೆ. ಇಬ್ಬರು ಆರೋಪಿಗಳನ್ನು DRI ಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶೌಚಾಲಯದಲ್ಲಿ ಸಿಕ್ಕಿರುವ ಚಿನ್ನದ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.