ಶಿವಮೊಗ್ಗ : ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಶಾಶ್ವತ ನೆನಪಿನ ಕಾರ್ಯಕ್ರಮವಾಗಬೇಕು. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಹಳೇಯ ವಿದ್ಯಾರ್ಥಿಗಳು ಸಹಸ್ರ ಸಂಖ್ಯೆಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎ.ಇಂದೂಧರ ಬೇಸೂರು ತಿಳಿಸಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಸುವರ್ಣ ಮಹೋತ್ಸವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಕಾಲೇಜು ಒಂದರ ಸುವರ್ಣ ಮಹೋತ್ಸವ ಎಂದರೆ ಅಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ದೊಡ್ಡ ಹಬ್ಬ ಇದ್ದಂತೆ. ಹಬ್ಬದ ರೀತಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪೂರ್ಣ ನೆಹರೂ ಮೈದಾನವನ್ನು ಸುವರ್ಣ ಸಂಭ್ರಮಕ್ಕಾಗಿ ಸಜ್ಜುಗೊಳಿಸಲಾಗುತ್ತಿದೆ. ಸುಮಾರು ೫೩ ವರ್ಷದಲ್ಲಿ ೬೦ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಓದಿ ಉನ್ನತ ಸ್ಥಾನದಲ್ಲಿದ್ದಾರೆ. ಅವರನ್ನು ಎದುರುಗೊಳ್ಳುವುದೇ ಒಂದು ಸಂಭ್ರಮ ಎಂದರು.
ಇದೇ ಡಿಸೆಂಬರ್ 23 ಮತ್ತು 24೪ರಂದು ಎರಡು ದಿನ ಸುವರ್ಣ ಮಹೋತ್ಸವ ನಡೆಯಲಿದೆ. ಡಿ.23ಕ್ಕೆ 95 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಐದು ಕೊಠಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಲೋಕಾರ್ಪಣೆ ಮಾಡಲಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವರು, ಸಂಸದರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಎರಡೂ ದಿನ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ. ಸುವರ್ಣ ಸಂಭ್ರಮ ಕಾರ್ಯಕ್ರಮದ ಯಶಸ್ಸಿಗೆ ಶಾಸಕರು ವಿಶೇಷ ಅನುದಾನ ಕೊಡಿಸಿದ್ದಾರೆ. ಡಿ.24ರಂದು ಸಂಜೆ 7ಕ್ಕೆ ರಾಜೇಶ್ ಕೃಷ್ಣನ್ ತಂಡದಿಂದ ರಸಮಂಜರಿ ಕಾರ್ಯಕ್ರಮ ಇರುತ್ತದೆ. ಸಾರ್ವಜನಿಕರು ಎರಡೂ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಕೆ.ಸಿ.ಸತ್ಯನಾರಾಯಣ ಮಾತನಾಡಿ, ಎರಡೂ ದಿನಗಳ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಓದಿ ಬೇರೆ ಬೇರೆ ಭಾಗದಲ್ಲಿರುವ ಹಳೇಯ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಳೇಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಕಾಲೇಜು ಅಭಿವೃದ್ದಿ ಸಮಿತಿಯ ಲೋಕೇಶ್, ಬಸವರಾಜ್, ಭವ್ಯ ಕೃಷ್ಣಮೂರ್ತಿ, ಕಾಲೇಜಿನ ಉಪನ್ಯಾಸಕ ವರ್ಗದವರು ಹಾಜರಿದ್ದರು.
ಶಿವಮೊಗ್ಗ; ಹೊಸನಗರ ತಾಲ್ಲೂಕಿನಲ್ಲಿ 8 ಮಂಗನ ಕಾಯಿಲೆ ಕೇಸ್ ದೃಢ- ಸಾಗರ ಎಸಿ ವೀರೇಶ್ ಕುಮಾರ್
BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಇನ್ನೂ ಕೊಡುಗೈ ದಾನಿ ನೆನಪು ಮಾತ್ರ
ನೀವು ಈ ತಪ್ಪು ಮಾಡ್ತಿದ್ದೀರಾ.? ಎಚ್ಚರ, ನಿಮ್ಮ ‘IRCTC’ ಖಾತೆ ಬ್ಯಾನ್ ಆಗುತ್ತೆ! 3 ಕೋಟಿಗೂ ಹೆಚ್ಚು ಖಾತೆ ನಿರ್ಬಂಧ








