ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಾದ ಕೆ-ಸೆಟ್ (K-SET) ಮತ್ತು ಯುಜಿಸಿ-ನೆಟ್ (UGC-NET) ಎದುರಿಸಲು ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) ಭರ್ಜರಿ ಅವಕಾಶವೊಂದನ್ನು ನೀಡಿದೆ.
ಮೈಸೂರಿನ ಕರಾಮುವಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿರುವ 45 ದಿನಗಳ ತೀವ್ರತರದ ತರಬೇತಿ ಶಿಬಿರಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿಯ ಮುಖ್ಯಾಂಶಗಳು:
-
ಯಾವ ಪರೀಕ್ಷೆಗಳಿಗೆ ತರಬೇತಿ?: 1. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET). 2. ರಾಷ್ಟ್ರಮಟ್ಟದ ಸಹಾಯಕ ಪ್ರಾಧ್ಯಾಪಕರ (UGC-NET) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (JRF) ಅರ್ಹತಾ ಪರೀಕ್ಷೆಗಳು.
-
ತರಬೇತಿ ಅವಧಿ: 45 ದಿನಗಳು.
-
ಸ್ಥಳ: ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ, ಮೈಸೂರು.
ಅರ್ಜಿ ಸಲ್ಲಿಸುವ ವಿಧಾನ ಮತ್ತು ದಿನಾಂಕ:
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಏಪ್ರಿಲ್ 24, 2026 ಕೊನೆಯ ದಿನವಾಗಿದೆ ಎಂದು ಕರಾಮುವಿ ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್.ಕೆ. ಅವರು ತಿಳಿಸಿದ್ದಾರೆ.
ಸಹಾಯವಾಣಿ: > ಹೆಚ್ಚಿನ ಮಾಹಿತಿ ಅಥವಾ ದಾಖಲಾತಿ ಪ್ರಕ್ರಿಯೆಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದಾಗಿದೆ.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳು ಈ ತರಬೇತಿಯ ಸದುಪಯೋಗ ಪಡಿಸಿಕೊಳ್ಳುವಂತೆ ಕೋರಲಾಗಿದೆ.
‘KSRTC’ಯನ್ನು ಗುಜರಿ ಮಾಡಿದ್ದು ಯಾರು?; ಯಡಿಯೂರಪ್ಪ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಕಿಡಿ








