ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಸಹೋದರರಿಗೆ ಸಂಬಂಧಿಸಿದಂತ ದಾಖಲೆಗಳನ್ನು ಖಂಡಿತವಾಗಿಯೂ ಬಿಡುಗಡೆ ಮಾಡಲೇ ಬೇಕು. ಅದಕ್ಕೆ ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿಕೊಂಡು ಬಿಡುಗಡೆ ಮಾಡಬೇಕು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕುಮಾರಸ್ವಾಮಿ ಸಹೋದರನ ಆಶ್ತಿ ದಾಖಲೆ ಬಿಡುಗಡೆ ಮಾಡುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿಯೂ ಮಾಡಲೇಬೇಕು. ಅದಕ್ಕೆ ಶುಭದಿನ, ಶುಭ ಗಳಿಗೆ, ಶುಭ ನಕ್ಷತ್ರ ನೋಡಿ ಬಿಡುಗಡೆ ಮಾಡಬೇಕು. ಅದಕ್ಕಿಂತ ಮುಂಚೆ ನಮ್ಮ ಬಗ್ಗೆ ಮಾಡುತ್ತಿರುವ ಆರೋಪಗಳ ಬಗ್ಗೆ ದಾಖಲೆ ಬಿಚ್ಚಿ ಎಂದು ಹೇಳಿದ್ದೇನೆ” ಎಂದು ತಿಳಿಸಿದರು.
ಸದನದಲ್ಲಿ ಚರ್ಚೆ ಮಾಡಲು ನೀವು ಆಹ್ವಾನ ಕೊಟ್ಟರೂ ಅವರು ಬರಲಿಲ್ಲ ಎಂದು ಕೇಳಿದಾಗ, “ಈ ವಿಚಾರವಾಗಿ ಚರ್ಚೆ ಮಾಡಲು ಎರಡು ಬಾರಿ ಅಧಿವೇಶನಕ್ಕೆ ಬನ್ನಿ ಎಂದು ಆಹ್ವಾನ ನೀಡಿದೆ. ಅವರು ಬರಲಿಲ್ಲ. ಈಗ ಅವರ ಅಣ್ಣನ ಬಳಿ ದಾಖಲೆ ಕೊಟ್ಟು ಕಳಿಸಿ ಚರ್ಚೆ ಮಾಡಲಿ. ನಾನು ಸುಮ್ಮನೆ ಮಾಧ್ಯಮಗಳ ಮುಂದೆ ಮಾತನಾಡಿದರೆ ಅದು ಒಂದೆರಡು ದಿನ ಸುದ್ದಿಯಾಗಿ ಮರೆಯಾಗುತ್ತದೆ. ಆದರೆ, ಸದನದಲ್ಲಿ ಚರ್ಚೆಯಾದರೆ ಅದು ದಾಖಲೆಯಾಗಿ ಉಳಿದು ಮುಂದಿನ ತಲೆಮಾರಿನವರು ತಿಳಿಯಬಹುದು. ನನಗೆ ಈಗ ಸಮಯವಿಲ್ಲ. ಅವರ ಎಲ್ಲಾ ದಾಖಲೆ ತೆಗೆಸುತ್ತೇನೆ” ಎಂದು ತಿಳಿಸಿದರು.
BREAKING :`PG’ ವೈದ್ಯರ ಕಡ್ಡಾಯ ಸೇವಾ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ | Karnataka High Court
7ನೇ ವೇತನ ಆಯೋಗ : ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ | 7th Pay Commission