ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗಕ್ಕೆ 5,500 ಶಾಲಾ ಶಿಕ್ಷಕರ ನೇಮಕ ಮಾಡಲಾಗುತ್ತಿದೆ. ಶಿಕ್ಷಣ ಮಟ್ಟ ಸುಧಾರಿಸಲು ಶಿಕ್ಷಕರನ್ನು ನೇಮಕ ಮಾಡುತ್ತಿದ್ದೇವೆ. ಅಷ್ಟೇ ಅಲ್ಲದೆ ನಮ್ಮ ಸಂಪುಟ ಉಪ ಸಮಿತಿ ನಿಗವಹಿಸುತ್ತದೆ. ಪರೀಕ್ಷೆಯಲ್ಲಿ ಪಾರದರ್ಶಕತೆಯನ್ನು ತರುವುದು ನಮ್ಮ ಗುರಿಯಾಗಿದೆ ಎಂದು ಸಚಿವ ಶರಪ್ರಕಾಶ್ ಪಾಟೀಲ್ ತಿಳಿಸಿದರು.
ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಬುರ್ಗಿಯಲ್ಲಿ ನಾಳೆ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಈ ಒಂದು ಉದ್ಯೋಗ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಬೃಹತ್ ಉದ್ಯೋಗ ಮೇಳ ನಡೆಯಲಿದೆ.
ಉದ್ಯೋಗ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷರು ಚಾಲನೆ ನೀಡುತ್ತಾರೆ. ಇದು ನಮ್ಮ ಯುವನಿಧಿ ಕಾರ್ಯಕ್ರಮದ ಒಂದು ಭಾಗ ಕೂಡ. ಉದ್ಯೋಗ ಮೇಳದಲ್ಲಿ 250ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ನೀಡಬೇಕು ಕೆಲಸ ಆಗಲಿದೆ. ಆಯ್ಕೆಯಾದವರಿಗೆ ಸ್ಥಳದಲ್ಲಿ ನೇಮಕಾತಿ ಆದೇಶ ಪತ್ರ ವಿತರಣೆ ಮಾಡಲಾಗುತ್ತದೆ ಎಂದರು.