ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ರಾಮಲಿಂಗ ರೆಡ್ಡಿ ಅವರು, ಸಾರಿಗೆ ಇಲಾಖೆಯಲ್ಲಿ 2 ಸಾವಿರ ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಶೀಘ್ರವೇ ಖಾಲಿ ಇರುವ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು, ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆ ತುಂಬಿರಲಿಲ್ಲ. ಚಾಲಕರು ಮತ್ತು ನಿರ್ವಾಹಕರು ಹಾಗೂ ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 5800 ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ 2400 ಬಸ್ ಗಳ ಖರೀದಿ ಮಾಡಲಾಗಿದು, ಶೀಘ್ರವೇ ಉಳಿದ ಬಸ್ ಗಳನ್ನು ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.