ಬೆಳಗಾವಿ : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಸದಸ್ಯ ಮಂಜುನಾಥ್ ಭಂಡಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್. ಅಶೋಕ್, ಕೃಷಿಯೇತರ ಭೂ ಪರಿವರ್ತನೆಗಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ಆ ಬಗ್ಗೆ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಅವರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ. ಈ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಣಗೊಳಿಸಲು ಇದೇ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.
ಕೃಷಿಯೇತರ ಭೂ ಪರಿವರ್ತನೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ರೈತರಿಗೆ ಅವಕಾಶ ಕಲ್ಪಿಸಲಾಗುವುದು, ಕೃಷಿ ಭೂಮಿಯಲ್ಲಿ ಶೇ. 10 ರಷ್ಟು ಮೀರದ ಜಾಗದಲ್ಲಿ ತೋಟದ ಮನೆ ನಿರ್ಮಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.