ತಿಪಟೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಗಳ ಮೂಲಕ 24 ಸಾವಿರ ಕೋಟಿ ರೂ. ಗಳನ್ನು 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದ ಆವರಣದಲ್ಲಿ ಶನಿವಾರ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಗಳ ಮೂಲಕ 24 ಸಾವಿರ ಕೋಟಿ ರೂ. ಗಳನ್ನು 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಯೋಜನೆಗೆ ಚಾಲನೆ ನೀಡಲಾಗಿದ್ದು, ಈಗಾಗಲೇ 7 ಸಾವಿರ ಕೋಟಿ ರೂ.ಗಳನ್ನು ತೆಗೆದಿರಿಸಲಾಗಿದೆ ಎಂದರು.
ಇನ್ನು ರಾಜ್ಯ 33 ಲಕ್ಷ ರೈತರಿಗೆ ಸಾಲ ಸವಲತ್ತುಗಳನ್ನು ನೀಡಲು ಮತ್ತು ನಿರ್ವಹಣೆ ಮಾಡಲು ಒಂದೇ ತಂತ್ರಾಂಶವನ್ನು ಕೇಂದ್ರ ಸರಕಾರದ ಸೂಚನೆಯಂತೆ ಅಳವಡಿಸಲಾಗುತ್ತಿದೆ. ಇದಕ್ಕಾಗಿ ಕೇಂದ್ರ ಸರ್ಕಾರ 360 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.