ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಪಂಚಕರ್ಮ ಸೇವೆ ಆರಂಭಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ರಾಜ್ಯದಲ್ಲಿ ಗುಣಮಟ್ಟದ ಆಯುರ್ವೇದ ಚಿಕಿತ್ಸಾ ಸೇವೆ ದೊರಕುವಂತೆ ನಮ್ಮ ಸರ್ಕಾರ ಯೋಜನೆ ರೂಪಿಸುತ್ತಿದೆ. ಬೆಂಗಳೂರಿನಲ್ಲಿ ಮಾತ್ರವಲ್ಲದೆ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಪಂಚಕರ್ಮ ಸೇವೆ ಸುಲಭವಾಗಿ ಸಿಗುವ ಹಾಗೆ ಮಾಡಲಾಗುವುದು ಎಂದು ಹೇಳಿದ್ದಾರೆ.