Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಪರಪುರಷನ ಜೊತೆಗೆ ಓಡಿ ಹೋದ ಪತ್ನಿ : ತುಮಕೂರಿನಲ್ಲಿ ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ.!

02/05/2026 10:13 AM

BREAKING : ಧರ್ಮಸ್ಥಳದ ಕುರಿತು ಅವಹೇಳನಕಾರಿ ಹೇಳಿಕೆ: ಗಿರೀಶ್ ಮಟ್ಟಣ್ಣನವರ್ ವಿರುದ್ಧ `FIR’ ದಾಖಲು

02/05/2026 10:04 AM

BIG NEWS : ತುಮಕೂರಲ್ಲಿ H5N1 ಭೀತಿ, ನವಿಲುಗಳ ಸಾವು ಬೆನ್ನಲ್ಲೆ, 30 ಕೋಳಿಗಳ ಸಾವು : ಹೈ ಅಲರ್ಟ್ ಘೋಷಣೆ!

02/05/2026 10:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : `ಉಪ್ಪಾರ ಅಭಿವೃದ್ದಿ ನಿಗಮದಿಂದ’ ಗಂಗಾ ಕಲ್ಯಾಣ ಸೇರಿ ವಿವಿಧ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
KARNATAKA

GOOD NEWS : `ಉಪ್ಪಾರ ಅಭಿವೃದ್ದಿ ನಿಗಮದಿಂದ’ ಗಂಗಾ ಕಲ್ಯಾಣ ಸೇರಿ ವಿವಿಧ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow5710/06/2025 12:46 PM

ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ನೀಡಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ನವೀಕರಣ), ಗಂಗಾ ಕಲ್ಯಾಣ ಯೋಜನೆ. ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು.

ಸ್ವಯಂ ಉದ್ಯೋಗ ನೇರಸಾಲ( ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ( ವಾರ್ಷಿಕ ವರಮಾನ ರೂ.15 ಲಕ್ಷ ಮಿತಿಯಲ್ಲಿರಬೇಕು. ವಿದ್ಯಾರ್ಥಿಯ ವಯಸ್ಸು 25( ಸ್ನಾತಕೋತ್ತರ ಪದವೀಧರರಿಗೆ) ಮತ್ತು ಪಿಎಚ್‌ಡಿ ಪದವೀಧರರಿಗೆ 27 ವರ್ಷಗಳ ನಿಗದಿಪಡಿಸಲಾಗಿದೆ) ಹಾಗೂ ಸ್ವತಂತ್ರ ಅಮೃತ ಮುನ್ನಡೆ ಯೋಜನೆಗೂ www.kaushalkar.com ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶದನ್ವಯ ಉಪ್ಪಾರ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರಬೇಕು, ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು, ನಿಗಮದ/ಸರ್ಕಾರದ ಯಾವುದಾರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು, ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುತ್ತದೆ.

ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷ ಒಳಗೊಂಡಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು, ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು, ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ರೂ.98 ಸಾವಿರ ಮತ್ತು ನಗರ ಪ್ರವೇಶದವರಿಗೆ ರೂ.1.20 ಲಕ್ಷ ಮಿತಿಯೊಳಗಿರಬೇಕು ಹಾಗೂ ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ಇರಿಸಲಾಗಿದೆ.

ಜು.3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಿರಬೇಕು, ಬೆಂಗಳೂರು-ಒನ್/ ಕರ್ನಾಟಕ ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://upparadevelopment.karnataka. gov.in ರಲ್ಲಿ ಅಥವಾ ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಗಾಂಧಿನಗರ ಇಲ್ಲಿ ಪಡೆಯಬಹುದು ಅಥವಾ ಕಛೇರಿ ದೂ.ಸಂ: 08182229634 ಗೆ ಅಥವಾ ಬೆಳಿಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

GOOD NEWS : Applications invited for various assistance facilities including Ganga Kalyana from `Uppara Abhivruddi Nigam'
Share. Facebook Twitter LinkedIn WhatsApp Email

Related Posts

SHOCKING : ಪರಪುರಷನ ಜೊತೆಗೆ ಓಡಿ ಹೋದ ಪತ್ನಿ : ತುಮಕೂರಿನಲ್ಲಿ ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ.!

02/05/2026 10:13 AM1 Min Read

BREAKING : ಧರ್ಮಸ್ಥಳದ ಕುರಿತು ಅವಹೇಳನಕಾರಿ ಹೇಳಿಕೆ: ಗಿರೀಶ್ ಮಟ್ಟಣ್ಣನವರ್ ವಿರುದ್ಧ `FIR’ ದಾಖಲು

02/05/2026 10:04 AM1 Min Read

BIG NEWS : ತುಮಕೂರಲ್ಲಿ H5N1 ಭೀತಿ, ನವಿಲುಗಳ ಸಾವು ಬೆನ್ನಲ್ಲೆ, 30 ಕೋಳಿಗಳ ಸಾವು : ಹೈ ಅಲರ್ಟ್ ಘೋಷಣೆ!

02/05/2026 10:04 AM1 Min Read
Recent News

SHOCKING : ಪರಪುರಷನ ಜೊತೆಗೆ ಓಡಿ ಹೋದ ಪತ್ನಿ : ತುಮಕೂರಿನಲ್ಲಿ ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ.!

02/05/2026 10:13 AM

BREAKING : ಧರ್ಮಸ್ಥಳದ ಕುರಿತು ಅವಹೇಳನಕಾರಿ ಹೇಳಿಕೆ: ಗಿರೀಶ್ ಮಟ್ಟಣ್ಣನವರ್ ವಿರುದ್ಧ `FIR’ ದಾಖಲು

02/05/2026 10:04 AM

BIG NEWS : ತುಮಕೂರಲ್ಲಿ H5N1 ಭೀತಿ, ನವಿಲುಗಳ ಸಾವು ಬೆನ್ನಲ್ಲೆ, 30 ಕೋಳಿಗಳ ಸಾವು : ಹೈ ಅಲರ್ಟ್ ಘೋಷಣೆ!

02/05/2026 10:04 AM

BREAKING: ಜಮ್ಮು-ದೋಡಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಭೂಕುಸಿತ: ಸಂಚಾರ ಸಂಪೂರ್ಣ ಸ್ಥಗಿತ !

02/05/2026 9:59 AM
State News
KARNATAKA

SHOCKING : ಪರಪುರಷನ ಜೊತೆಗೆ ಓಡಿ ಹೋದ ಪತ್ನಿ : ತುಮಕೂರಿನಲ್ಲಿ ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ.!

By kannadanewsnow5702/05/2026 10:13 AM KARNATAKA 1 Min Read

ತುಮಕೂರು: ಪತ್ನಿಯ ಅನೈತಿಕ ಸಂಬಂಧ ಹಾಗೂ ಆಕೆಯ ನಡವಳಿಕೆಯಿಂದ ಮನನೊಂದ ಪತಿಯೊಬ್ಬ ತನ್ನ ಇಬ್ಬರು ಮುಗ್ಧ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ…

BREAKING : ಧರ್ಮಸ್ಥಳದ ಕುರಿತು ಅವಹೇಳನಕಾರಿ ಹೇಳಿಕೆ: ಗಿರೀಶ್ ಮಟ್ಟಣ್ಣನವರ್ ವಿರುದ್ಧ `FIR’ ದಾಖಲು

02/05/2026 10:04 AM

BIG NEWS : ತುಮಕೂರಲ್ಲಿ H5N1 ಭೀತಿ, ನವಿಲುಗಳ ಸಾವು ಬೆನ್ನಲ್ಲೆ, 30 ಕೋಳಿಗಳ ಸಾವು : ಹೈ ಅಲರ್ಟ್ ಘೋಷಣೆ!

02/05/2026 10:04 AM

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಹೊಸ ರೂಲ್ಸ್ : ಇನ್ಮುಂದೆ `ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ.!

02/05/2026 9:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.