ಬೆಂಗಳೂರು : ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡುತ್ತಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಮಂಜೂರಾತಿ ಹುದ್ದೆಗಳಿಗೆ ಅನುಗುಣವಾಗಿ 2025-26ನೇ ಸಾಲಿಗೆ 4,689 ಅತಿಥಿ ಉಪನ್ಯಾಸಕ ರನ್ನು ನೇಮಿಸಲು ಶಿಕ್ಷಣ ಇಲಾಖೆ ಆದೇಶಿಸಿದೆ.
ಹೌದು ಅತಿಥಿ ಉಪನ್ಯಾಸಕರಿಗೆ ಮಾಸಿಕ 14 ಸಾವಿರ ವೇತನ ನಿಗದಿಪಡಿಸಲಾಗಿದೆ. ಅತಿಥಿ ಉಪನ್ಯಾಸಕ ರಿಗೆ ವಾರದಲ್ಲಿ 10 ಗಂಟೆಗಳ ಕಾರ್ಯಭಾರ ನಿರ್ವಹಿಸಲು ಮಾತ್ರ ಅನುಮತಿ ನೀಡಬೇಕು. ಯಾವುದೇ ಕಾಲೇಜಿನಲ್ಲಿ 10/12 ಗಂಟೆಗಳಿಗಿಂತ ಹೆಚ್ಚು ಕಾರ್ಯಭಾರ ಇದ್ದಲ್ಲಿ ಮಾತ್ರ ಇಬ್ಬರು ಅತಿಥಿ ಉಪನ್ಯಾ ಸಕರನ್ನು ನೇಮಿಸಿಕೊಳ್ಳಬಹುದು.
ವಿಷಯದಲ್ಲಿ ಬೋಧನೆಗೆ ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳು ಮುಂದೆ ಬಂದರೆ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದವರನ್ನು ಕಾಲೇಜಿನ ಪ್ರಾಚಾರ್ಯರು ಮತ್ತು ಹಿರಿಯ ಉಪನ್ಯಾಸಕರ ಸಮಿತಿ ಆಯ್ಕೆ ಮಾಡಬೇಕು ಎಂದು ಸೂಚಿಸಲಾಗಿದೆ.ಆಯಾ ಜಿಲ್ಲಾ ವ್ಯಾಪ್ತಿಯ ಪಿಯು ಕಾಲೇಜುಗಳಲ್ಲಿ ಕಡಿಮೆ ಕಾರ್ಯ ಭಾರ ಹೊಂದಿರುವ ವಿಷಯಗಳಿಗೆ ಉಪ ನ್ಯಾಸಕರನ್ನು ಜಿಲ್ಲೆಯ ಇತರೆ ಕಾಲೇ ಜುಗಳಲ್ಲಿ ಖಾಲಿ ಹುದ್ದೆಗಳಿಗೆ ನಿಯೋಜಿಸಿದ ನಂತರ ಅತಿಥಿ ಉಪ ನ್ಯಾಸಕರನ್ನು ನೇಮಿಸಿ ಕೊಳ್ಳಬೇಕು ಎಂದು ತಿಳಿಸಿದೆ.