ಬೆಂಗಳೂರು : ಎಸ್ ಎಸ್ ಎಲ್ ಸಿ 2 ಬರೆಯುವ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಒಂದು ಇದ್ದು, ಪರೀಕ್ಷೆ 2ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಸೇವೆ ಒದಗಿಸಲು ಇದೀಗ ಬಿಎಂಟಿಸಿ ಮುಂದಾಗಿದೆ.

ವಿದ್ಯಾರ್ಥಿಗಳು ಬಿಎಂಟಿಸಿ ಬಸ್ ಹೌದು ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಜೂನ್ 16 ರಿಂದ 22 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ.

ವಿದ್ಯಾರ್ಥಿ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದ ವರೆಗು ಉಚಿತ ಪ್ರಯಾಣ ಇರಲಿದೆ ಹಾಲ್ ಟಿಕೆಟ್ ತೋರಿಸಿ ವಿದ್ಯಾರ್ಥಿಗಳು ಉಚಿತ ಪ್ರಯಾಣ ಮಾಡಬಹುದಾಗಿದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

Share.
Exit mobile version