ಬೆಂಗಳೂರು : ಪೌರಕಾರ್ಮಿಕರನ್ನು ನೇಮಕಾತಿಯು ಐತಿಹಾಸಿಕ ತೀರ್ಮಾನವಾಗಿದ್ದು ಬೇರೆ ಯಾವ ರಾಜ್ಯದಲ್ಲಿಯೂ ಇದು ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಲಿಬಿಯಾದಲ್ಲಿ ದೋಣಿ ದುರಂತ: 22 ಮಾಲಿಯನ್ ವಲಸಿಗರು ಸಾವು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ಣಯವನ್ನು ಪೌರಕಾರ್ಮಿಕರು ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಪೌರಕಾರ್ಮಿಕರ ವಿಶೇಷ ನೇಮಕಾತಿ ಸಲುವಾಗಿ ಸಮಿತಿ ರಚಿಸಲಾಗುತ್ತಿದ್ದು, ಸಮಿತಿಯಲ್ಲಿ ಕಾರ್ಮಿಕ ಮುಖಂಡರು, ನಿಗಮದ ಅಧ್ಯಕ್ಷರು, ಪದಾಧಿಕಾರಿಗಳು, ಕಾನೂನು ಇಲಾಖೆ ಅಧಿಕಾರಿಗಳು ಇರಲಿದ್ದು, ನೇರವಾಗಿ ಹಣ ಪಾವತಿ ಆಗಿದ್ದರೂ, ಖಾಯಂ ಆಗದೆ ಸವಲತ್ತುಗಳು ದೊರಕದವರಿಗೆ ಅನುಮೋದನೆ ಪಡೆದು ನೀಡಲು ತೀರ್ಮಾನಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ ಹಾಗೂ ಸಹಕಾರ ನೀಡುವುದಾಗಿ ಹೇಳಿದ್ದಾರೆ ಎಂದರು.

BIGG NEWS : ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಈ ಬಾರಿಯೂ ರಾಜ್ಯ ಸರ್ಕಾರದಿಂದ ಸೈಕಲ್ ವಿತರಣೆ ಇಲ್ಲ!

ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅವರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಆಯವ್ಯಯದಲ್ಲಿ ಎರಡು ಸಾವಿರ ರೂ.ಗಳ ಸಂಕಷ್ಟ ಪರಿಹಾರ ನೀಡಲಾಗಿದೆ. ಖಾಯಂ ಆದರೆ ಬದುಕು ಚೆನ್ನಾಗಿ ಆಗುತ್ತದೆ ಎನ್ನುವ ನಂಬಿಕೆ ಅವರ ಮನಸ್ಸಿನಲ್ಲಿ ಇತ್ತು ಹಾಗಾಗಿ ಅವರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಖಾಯಂಗೊಳಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದರು.

Big news:‌ ಬ್ರಿಟನ್ ಸಚಿವ ಸ್ಥಾನಕ್ಕೆ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ʻರಿಷಿ ಸುನಕ್ʼ ರಾಜೀನಾಮೆ

Share.
Exit mobile version