ಹಾವೇರಿ : ಗ್ರಾಮೀಣ ಗುಡಿ ಕೈಗಾರಿಕೆ ಪ್ರೋತ್ಸಾಹಿಸಲು ಕುಂಬಾರ, ಬಡಗಿ, ಕಮ್ಮಾರ ಸೇರಿ ವಿವಿಧ 15 ವೃತ್ತಿಯಲ್ಲಿ ತೊಡಗಿರುವ ಗ್ರಾಮೀಣ ಕಸುಬುದಾರರಿಗೆ ತಲಾ 50 ಸಾವಿರ ರೂ. ನೀಡಲು ಯೋಜನೆ ತರಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BIGG NEWS : ರಾಜ್ಯದಲ್ಲಿ ಕೋವಿಡ್ ಆತಂಕ : ಹೊಸವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ
ಸವಣೂರು ತಾಲ್ಲೂಕಿನ ಕಾರಡಗಿ ಶ್ರೀ ವೀರಭದ್ರೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಯಾತ್ರಿನಿವಾಸ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಬಡಿಗರು, ಕುಂಬಾರರು ಸೇರಿದಂತೆ ಸುಮಾರು 15 ವಿಧದ ಕಸುಬುದಾರರು ತಮ್ಮ ವೃತ್ತಿಯಲ್ಲಿ ಏಳಿಗೆಯನ್ನು ಕಂಡುಕೊಳ್ಳಲು 50 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುವುದ ಎಂದು ತಿಳಿಸಿದ್ದಾರೆ.
BIGG NEWS : ಅರೆಸೇನಾ ಪಡೆಗಳ ನಿವೃತ್ತ ಯೋಧರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್
20 ಲಕ್ಷ ರೈತರಿಗೆ ಸಾಲ ಕೊಡುವ ಯೋಜನೆ, ಯಶಸ್ವಿನಿ ಯೋಜನೆಗಳನ್ನು ಪ್ರಾರಂಭಿಸಲಾಗಿದೆ. ಹಾಲು ಉತ್ಪಾದಕರಿಗೆ ಕ್ಷೀರ ಅಭಿವೃದ್ಧಿ ಬ್ಯಾಂಕ್, ರೈತ ಶಕ್ತಿ ಡೀಸೆಲ್ ಯೋಜನೆಯನ್ನು ಮುಂದಿನ ತಿಂಗಳಿನಿಂದ ಪ್ರಾರಂಭಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯ ಮೂಲಕ 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ, ಸ್ತ್ರೀ ಸಾಮರ್ಥ್ಯ ಯೋಜನೆಯ ಮೂಲಕ 5 ಲಕ್ಷ ಆರ್ಥಿಕ ಸಹಾಯ ನೀಡಿ ಸ್ವಯಂ ಉದ್ಯೋಗ, ಹೀಗೆ ದುಡಿಯುವ ವರ್ಗಕ್ಕೆ ಆರ್ಥಿಕ ಸಬಲೀಕರಣಗೊಳಿಸಲಾಗುವುದು. ಗ್ರಾಮಗಳ ಮೂಲಭೂತ ಸೌಕರ್ಯ ವೃದ್ಧಿಸಲಾಗುತ್ತಿದೆ ಎಂದರು.