ತುಮಕೂರು : ಹೊಸ ವರ್ಷಕ್ಕೆ ಹಿರಿಯ ನಾಗರಿಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, 60 ವರ್ಷ ಮೇಲ್ಪಟ್ಟ ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಯೋಜನೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ ಉಚಿತ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ನಂತರ ಮಾತನಾಡಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ ತೆರೆಯವುದಾಗಿ ಡಾ. ಭುಜಂಗ ಶೆಟ್ಟಿ ಹೇಳಿದ್ದಾರೆ, ಅವರ ಯೋಜನೆ ಬೇಗ ಈಡೇರಲಿ ಎಂದು ಸಿಎಂ ಹೇಳಿದರು. ಡಾ. ಭುಜಂಗ ಶೆಟ್ಟಿಯವರು ತಮ್ಮ ವೃತ್ತಿಯಲ್ಲಿ ಯಶಸ್ವಿಯಾಗಿದ್ದು, ಅವರಿಗೆ ನಾನು ಎಂಬ ಭಾವನೆ ಇಲ್ಲ ಎಂದು ಹೇಳಿದರು.
ಇನ್ನೂ, ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಯೋಜನೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ನಮ್ಮ ಸರ್ಕಾರ ಕಣ್ಣಿನ ಚಿಕಿತ್ಸೆಗೆ ಯೋಜನೆ ರೂಪಿಸಿದೆ, ಈ ಯೋಜನೆ ಜನವರಿಯಲ್ಲಿ ಚಾಲನೆಗೊಳ್ಳಲಿದೆ. ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಈ ಯೋಜನೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಿದೆ ಎಂದು ಬೊಮ್ಮಾಯಿ ಹೇಳಿದರು.