Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಉದ್ಯೋಗಾಕಾಂಕ್ಷಿಗಳಿಗೆ `CM’ ಭರ್ಜರಿ ಗುಡ್ ನ್ಯೂಸ್ : ‘KPTCL’ ನಲ್ಲಿ ಖಾಲಿ ಇರುವ 35,000 ಹುದ್ದೆಗಳ ಭರ್ತಿ
KARNATAKA

GOOD NEWS : ಉದ್ಯೋಗಾಕಾಂಕ್ಷಿಗಳಿಗೆ `CM’ ಭರ್ಜರಿ ಗುಡ್ ನ್ಯೂಸ್ : ‘KPTCL’ ನಲ್ಲಿ ಖಾಲಿ ಇರುವ 35,000 ಹುದ್ದೆಗಳ ಭರ್ತಿ

By kannadanewsnow57

ಬೆಂಗಳೂರು : ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಆಯೋಜಿಸಿದ್ದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಹಂತ ಹಂತವಾಗಿ ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತೆ ಎಂದರು.

ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಎನ್‌ಪಿಎಸ್ ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು ಒಪಿಎಸ್ ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. 1964ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಸುದೀರ್ಘ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು.

ಇಡೀ ಏಷ್ಯಾದಲ್ಲಿ ಮೊದಲಿಗೆ ವಿದ್ಯುತ್ ಉತ್ಪಾದನೆ ಆಗಿದ್ದು 1902 ರಲ್ಲಿ ಕರ್ನಾಟಕದಲ್ಲಿ. 1905 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ವಿದ್ಯುತ್ ಸರಬರಾಜು ಕಂಪನಿ ಆರಂಭಿಸಲಾಯಿತು. 1908 ರಲ್ಲಿ ಮೊದಲ ಬಾರಿ ಅರಮನೆಗೆ ವಿದ್ಯುತ್ ಬಂತು. ಅಲ್ಲಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹಂತ ಹಂತವಾಗಿ ಪ್ರಗತಿ ಸಾಧಿಸುತ್ತಾ, ಇಂದು 34,000 ಮೆಗಾ ವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ನಮ್ಮದಾಗಿದೆ.

ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗುತ್ತಿರುವುದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿರುವ ಕಾರಣಕ್ಕೇ.
ರೈತರ ಕೃಷಿಗೆ ಪಂಪ್ ಸೆಟ್ ಗಳಿಗೆ ಹಗಲಲ್ಲೂ 7 ಗಂಟೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಶಕ್ತರಾಗುತ್ತೇವೆ. ಈ ಗುರಿ ಇಟ್ಟುಕೊಂಡು ಕೆಲಸಗಳು ನಡೆಯುತ್ತಿವೆ. 60,000 ಮೆಗಾ ವ್ಯಾಟ್ ಉತ್ಪಾದನೆ ಗುರಿ ನಾವು ತಲುಪಿದ ತಕ್ಷಣ ಇದು ಸಾಧ್ಯವಾಗಲಿದೆ. ವಿದ್ಯುತ್ ಪ್ರಮುಖ ಕಚ್ಚಾವಸ್ತು ಎನ್ನುವುದನ್ನು ನಾವು ಮರೆಯಬಾರದು. ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೀರಿ. ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ನಮ್ಮ ಸರ್ಕಾರ ಸಿದ್ಧವಿದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ನೀವು ನಮ್ಮ ಜೊತೆಗೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ.

ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಎನ್‌ಪಿಎಸ್ ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು… pic.twitter.com/pKJpKvBQ1F

— Siddaramaiah (@siddaramaiah) June 18, 2025

GOOD NEWS: `CM’ great news for job seekers: 35000 vacant posts in 'KPTCL' filled
Share. Facebook Twitter LinkedIn WhatsApp Email

Related Posts

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

1 Min Read

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

2 Mins Read

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

2 Mins Read
Recent News

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

‘ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇಲ್ಲ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು!’: ಸುಪ್ರೀಂ ಕೋರ್ಟ್

State News
KARNATAKA

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಲಿಂಡರ್‌ಗಾಗಿ ಸಾರ್ವಜನಿಕರು…

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.