ಬೆಳಗಾವಿ : ರಾಜ್ಯದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಬಾಕಿ ಇರುವ ಗೃಹಲಕ್ಷ್ಮೀ ಹಣವನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಶೋತ್ತರ ಅವಧಿ ಬಳಿಕ ಪ್ರತಿಪಕ್ಷ ನಾಯಕ ಆರ್ಳ. ಅಶೋಕ್ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಗೃಹ ಲಕ್ಷ್ಮೀ ಹಣವನ್ನು ಆಗಸ್ಟ್ ತಿಂಗಳವರೆಗೆ ನೀಡಲಾಗಿದೆ. ಒಂದು ವೇಳೆ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಫಲಾನುಭವಿಗಳ ಖಾತೆಗಳಿಗೆ ಹೋಗಿಲ್ಲ ಎನ್ನುವುದಾದರೆ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದರು.
ಆಗಸ್ಟ್ ವರೆಗೆ ಎಲ್ಲಾ ಹಣ ಪಾವತಿ ಮಾಡಲಾಗಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ ಹಣವನ್ನು ಸದ್ಯದಲ್ಲೇ ಪಾವತಿಸಲಾಗುವುದು. ಫೆಬ್ರವರಿ, ಮಾರ್ಚ್ ತಿಂಗಳ ಹಣ ನೀಡಿಲ್ಲ ಎಂದಾದರೆ ಕೂಡಲೇ ಬಿಡುಗಡೆ ಮಾಡಿಸಲಾಗುವುದು ಎಂದು ಹೇಳಿದ್ದಾರೆ.








