Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ನ್ಯೂಜಿಲೆಂಡ್ ನಡುವೆ ‘ಅಪರೂಪದ’ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಸಹಿ: ರಫ್ತುದಾರರಿಗೆ ಸಿಗಲಿದೆ ಭರ್ಜರಿ ಲಾಭ!

27/04/2026 7:51 AM

KEA ಇಂದ ಸಿಇಟಿ-2026 ಕೀ ಉತ್ತರ ಬಿಡುಗಡೆ; ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ

27/04/2026 7:45 AM

ಭಾರತದ ಪವನ ಇಂಧನ ಉತ್ಪಾದನೆಯಲ್ಲಿ ಐತಿಹಾಸಿಕ ಮೈಲಿಗಲ್ಲು: 56 GW ಸಾಮರ್ಥ್ಯ ದಾಟಿದ ದೇಶ, ಪ್ರಧಾನಿ ಮೋದಿ ಹರ್ಷ

27/04/2026 7:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : `ಖಾಯಂ’ ನಿರೀಕ್ಷೆಯಲ್ಲಿರುವ ರಾಜ್ಯದ ಪೌರ ಕಾರ್ಮಿಕರಿಗೆ CM ಸಿದ್ದರಾಮಯ್ಯ ಭರ್ಜರಿ ಗುಡ್ ನ್ಯೂಸ್.!
KARNATAKA

GOOD NEWS : `ಖಾಯಂ’ ನಿರೀಕ್ಷೆಯಲ್ಲಿರುವ ರಾಜ್ಯದ ಪೌರ ಕಾರ್ಮಿಕರಿಗೆ CM ಸಿದ್ದರಾಮಯ್ಯ ಭರ್ಜರಿ ಗುಡ್ ನ್ಯೂಸ್.!

By kannadanewsnow5721/04/2025 2:15 PM

ಬೆಳಗಾವಿ : ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು.

ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು.

ಕೇಂದ್ರ ಮತ್ತು ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ-ಕೇಂದ್ರ ಸರಕಾರಗಳು ತಲಾ ಶೇ.50 ರಷ್ಟು ಅನುದಾನವನ್ನು ಒದಗಿಸಿವೆ. ಬೆಳಗಾವಿ ನಗರದಲ್ಲಿ ಇನ್ನು ಬಾಕಿ ಉಳಿದ ಕೆಲ ಕಾಮಗಾರಿಗಳು ಕೆಲವೇ ದಿನಗಳಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು.

ಹಿಂದಿನ ಸರಕಾರದ ಅವಧಿಯಲ್ಲಿಯೇ ಪೌರಕಾರ್ಮಿಕರನ್ನು ಖಾಯಂ ಮಾಡಲು ನಿರ್ಧರಿಸಲಾಗಿತ್ತು. ಗುತ್ತಿಗೆದಾರರ ಬದಲಾಗಿ ನೇರ ನೇಮಕಾತಿ ಮೂಲಕ ಕನಿಷ್ಠ 17 ಸಾವಿರ ರೂಪಾಯಿ ವೇತನ ನೀಡಲಾಗುತ್ತಿದೆ.

ಪೌರಕಾರ್ಮಿಕರ ಖಾಯಂ ಗೊಳಿಸುವ ಪ್ರಕ್ರಿಯೆ‌ ಚಾಲ್ತಿಯಲ್ಲಿದೆ. ಇದಲ್ಲದೇ ಚಾಲಕರು, ಕ್ಲೀನರ್ ಗಳಿಗೆ ಕನಿಷ್ಠ‌ ವೇತನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲ ವಿಕಲಚೇತನರಿಗೆ ತ್ರಿಚಕ್ರ ವಾಹನ ನೀಡಲು ನಿರ್ಧರಿಸಲಾಗಿದೆ.

ಹಲಗಾ ಎಸ್.ಟಿ.ಪಿ. ಹೆಚ್ಚಿನ ಪರಿಹಾರದ ಭರವಸೆ:

ಹಲಗಾ ಎಸ್.ಟಿ.ಪಿ. ಕಾಮಗಾರಿಗೆ ಸಂಬಂಧಿಸಿದಂತೆ ಹೆಚ್ಚಿನ ಜಮೀನು‌ ಭೂಸ್ವಾಧೀನ ಪರಿಹಾರ ಒದಗಿಸಲು ಅನುಕೂಲವಾಗುವಂತೆ ಹೆಚ್ಚಿನ ಪರಿಹಾರ ನೀಡಲು ಕಡತವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯದಲ್ಲಿ ಒಟ್ಟಾರೆ 6928 ಕೋಟಿ ರೂಪಾಯಿ ಸ್ಮಾರ್ಟ್ ಸಿಟಿ ಯೋಜನೆಗೆ ಬಿಡುಗಡೆಯಾಗಿದ್ದು, ಇದರಲ್ಲಿ 3500 ಕೋಟಿ ರಾಜ್ಯದ ಪಾಲು ಇದೆ. ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ಸರಕಾರ‌ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇದಕ್ಕೂ ಮುಂಚೆ ಮಾತನಾಡಿದ ನಗರಾಭಿವೃದ್ಧಿ ಇಲಾಖೆಯ ಸವರಾದ ಭೈರತಿ ಸುರೇಶ್, ರಾಜ್ಯ ಹಾಗೂ ಕೇಂದ್ರ ಸರಕಾರದ ಸಹಭಾಗಿತ್ವದ ಸ್ಮಾರ್ಟ್ ಸಿಟಿ ಯೋಜನೆಯಡಿ ಅತ್ಯಾಧುನಿಕ ಕಲಾ ಮಂದಿರ ಹಾಗೂ ವಾಣಿಜ್ಯ ಮಳಿಗೆ ಸ್ಥಾಪಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಸುಸಜ್ಜಿತ ವಾಣಿಜ್ಯ ಸಂಕೀರ್ಣ ಇದಾಗಿದೆ ಎಂದರು.

ರಾಜ್ಯದ ಎಲ್ಲೆಡೆ ವಾಣಿಜ್ಯ ಸಂಕೀರ್ಣ, ಬಸ್ ನಿಲ್ದಾಣ ಮತ್ತಿತರ ಮೂಲಸೌಕರ್ಯಗಳನ್ನು ಕಲ್ಪಿಸಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಸಾರ್ವಜನಿಕರು ಈ ಸೌಲಭ್ಯಗಳ ಸದ್ಬಳಕೆ‌ ಮಾಡಿಕೊಳ್ಳಬೇಕು ಎಂದು ಸಚಿವ ಭೈರತಿ ಸಲಹೆ ನೀಡಿದರು.

ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದ ಎಲ್ಲ ಪೌರಕಾರ್ಮಿಕರರಿಗೆ ಸ್ಥಳೀಯ ಸಂಸ್ಥೆಗಳ ಮೂಲಕವೇ ವೇತನ ನೀಡುವುದರ ಜತೆಗೆ ಅವರನ್ನು ಸರಕಾರಿ ನೌಕರರಾಗಿ ಪರಿಗಣಿಸಲು ಕ್ರಮ ತೆಗೆದುಕೊಳ್ಳಲಾಗುವುದು.

ಎರಡು ದಾಖಲೆಗಳಿದ್ದರೆ ಕ್ರಯಪತ್ರ ಜತೆಗೆ ವಿದ್ಯುತ್ ಹಾಗೂ ನೀರು ಸರಬರಾಜು ಬಿಲ್ ಗಳನ್ನು ಕೂಡ ಪರಿಗಣಿಸಿ ಇ-ಖಾತೆ ಮಾಡಿಕೊಡಲು ಸರಕಾರ ನಿರ್ಧರಿಸಿದೆ. ಬೆಳಗಾವಿ ನಗರದಲ್ಲಿ 50 ಸಾವಿರಕ್ಕೂ ಅಧಿಕ ಆಸ್ತಿಗಳಿಗೆ ಇ-ಖಾತೆ ಮಾಡಿಕೊಡಲಾಗುವುದು.

ತಲಾ 200 ಕೋಟಿ ರೂಪಾಯಿಯಂತೆ ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ಒಟ್ಟಾರೆ 200 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ ಎಂದು ಸಚುವ ಭೈರತಿ ಸುರೇಶ್ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಭಯ್ ಪಾಟೀಲ ಅವರು, ರಾಜ್ಯದಲ್ಲಿ ಬೆಳಗಾವಿಯಲ್ಲಿ ಮಾತ್ರ ಸ್ಮಾರ್ಟ್ ಸಿಟಿ ಯೋಜನೆಯಡಿ ವಿಶಿಷ್ಟ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಮತಕ್ಷೇತ್ರದಲ್ಲಿ ಇನ್ನೂ ಅನೇಕ ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಾಗುವುದು
ಎಂದು ಹೇಳಿದರು.

165 ಕೋಟಿ ರೂಪಾಯಿ ವೆಚ್ಚದಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ನಿರ್ಮಿಸಲಾಗುತ್ತಿರುವ ತ್ಯಾಜ್ಯ ಶುದ್ಧೀಕರಣ ಘಟಕಕ್ಕೆ ಇನ್ನೂ 17 ಎಕರೆ ಭೂಸ್ವಾಧೀನಕ್ಕೆ ಅನುಕೂಲವಾಗುವಂತೆ ಐದು ಕೋಟಿ ರೂಪಾಯಿ ಅನುದಾನವನ್ನು ಒದಗಿಸಬೇಕು ಎಂದು ಶಾಸಕ ಅಭಯ್ ಪಾಟೀಲ ಮನವಿ ಅವರು ಮುಖ್ಯಮಂತ್ರಿಗಳಿಗೆ ಮಾಡಿಕೊಂಡರು‌.

ವಿವಿಧ ಸೌಲಭ್ಯಗಳ ವಿತರಣೆ:

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಾನಗರ ಪಾಲಿಕೆ ವತಿಯಿಂದ ಶೇ.5 ರ ಯೋಜನೆಯಡಿ 4 ಜನ ವಿಕಲಚೇತನರಿಗೆ ಯಂತ್ರ ಚಾಲಿತ ಗಾಲಿ ಕುರ್ಚಿಗಳು, ಮಹಾನಗರ ಪಾಲಿಕೆಯಲ್ಲಿ ಖಾಯಂ, ನೇರಪಾವತಿ ಹಾಗೂ ಹೊರಗುತ್ತಿಗೆ ಅಧಾರದಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು/ಸ್ವಚ್ಛತಾ ಕಾರ್ಮಿಕರಿಗೆ ಸುರಕ್ಷತಾ ದಿರಸುಗಳು ಹಾಗೂ ಉಪಹಾರ ಸೇವಿಸುವ ಸಾಮಗ್ರಿಗಳನ್ನು ವಿತರಿಸಿದರು.

ಮಹಾನಗರ ಪಾಲಿಕೆಯ ಶೇ.24.10 ರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಂಡ ಹಾಗೂ 7.25 ಯೋಜನೆಯಡಿ ಇತರೆ ಹಿಂದುಳಿದ ವರ್ಗದ ಬಿ.ಇ ಮತ್ತು ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ಒಟ್ಟು 123 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಪೂರೈಸುವ ಯೋಜನೆಯಡಿ, ಸಾಂಕೇತಿಕವಾಗಿ 30 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಮಹಾನಗರ ಪಾಲಿಕೆಯ ಕಂದಾಯ ಶಾಖೆಯಿಂದ ಎ-ಖಾತಾ ಮತ್ತು ಬಿ-ಖಾತಾ (ಇ-ಖಾತಾ) ವಿತರಣೆ ಮಾಡಿದರು.

GOOD NEWS: CM Siddaramaiah's great good news for the state's civil servants who are waiting for 'permanent' jobs!
Share. Facebook Twitter LinkedIn WhatsApp Email

Related Posts

KEA ಇಂದ ಸಿಇಟಿ-2026 ಕೀ ಉತ್ತರ ಬಿಡುಗಡೆ; ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ

27/04/2026 7:45 AM1 Min Read

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM4 Mins Read

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM1 Min Read
Recent News

ಭಾರತ-ನ್ಯೂಜಿಲೆಂಡ್ ನಡುವೆ ‘ಅಪರೂಪದ’ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಸಹಿ: ರಫ್ತುದಾರರಿಗೆ ಸಿಗಲಿದೆ ಭರ್ಜರಿ ಲಾಭ!

27/04/2026 7:51 AM

KEA ಇಂದ ಸಿಇಟಿ-2026 ಕೀ ಉತ್ತರ ಬಿಡುಗಡೆ; ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ

27/04/2026 7:45 AM

ಭಾರತದ ಪವನ ಇಂಧನ ಉತ್ಪಾದನೆಯಲ್ಲಿ ಐತಿಹಾಸಿಕ ಮೈಲಿಗಲ್ಲು: 56 GW ಸಾಮರ್ಥ್ಯ ದಾಟಿದ ದೇಶ, ಪ್ರಧಾನಿ ಮೋದಿ ಹರ್ಷ

27/04/2026 7:40 AM

​ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯದ ಪೂಜಾರಿ ನಿಗೂಢ ಸಾವು: ನಾಪತ್ತೆಯಾದ ಮೂರು ದಿನದ ನಂತರ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

27/04/2026 7:32 AM
State News
KARNATAKA

KEA ಇಂದ ಸಿಇಟಿ-2026 ಕೀ ಉತ್ತರ ಬಿಡುಗಡೆ; ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ

By kannadanewsnow8927/04/2026 7:45 AM KARNATAKA 1 Min Read

ಬೆಂಗಳೂರು: ಇದೇ 23 ಮತ್ತು 24ರಂದು ನಡೆದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಎಲ್ಲ ವಿಷಯಗಳ ಕೀ…

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.