ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಗಂಡ-ಹೆಂಡತಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ಕೊಟ್ಟಿದ್ದು, ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 07 ವರ್ಷಗಳ ಸೇವಾವಧಿ ಪೂರ್ಣಗೊಳಿಸಿರುವ ಪೊಲೀಸ್ ಕಾನ್ಸ್ಟೇಬಲ್ ಮತ್ತು ಹೆಡ್-ಕಾನ್ಸ್ಟೇಬಲ್ಗಳು (ಪತಿ-ಪತ್ನಿ ಪ್ರಕರಣಗಳು) ಅಂತರಜಿಲ್ಲಾ ವರ್ಗಾವಣೆ ಕೋರಿದ್ದಲ್ಲಿ, ಅಂತಹ ಪ್ರಕರಣಗಳನ್ನು ಕಡ್ಡಾಯವಾಗಿ ಪರಿಗಣಿಸಿ ಸಿಬ್ಬಂದಿಗಳು ಕೋರಿರುವ ಜಿಲ್ಲೆಗಳಿಗೆ ಕೂಡಲೇ ವರ್ಗಾವಣೆಗೊಳಿಸುವಂತೆ ಹಾಗೂ ಸದರಿ ಮಾಹಿತಿಯನ್ನು ನಮ್ಮ ಕಚೇರಿಗೆ ಒದಗಿಸುವಂತೆ ಸೂಚನೆ ನೀಡಲಾಗಿದೆ.