ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಅನುದಾನಿತ ಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಸಿಹಿಸುದ್ದಿ ನೀಡಿದ್ದು, ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಿದೆ.
2023-24 ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಅನುದಾನಿತ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ಅವಕಾಶ ನೀಡಿದ್ದು, ವರ್ಗಾವಣೆ ಪ್ರಸ್ತಾವನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನಾಂಕವಾಗಿದೆ.
ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ಅಂತರ್ ವಿಭಾಗದ ವರ್ಗಾವಣೆ ಕೋರಿ ಬಂದ ಪ್ರಸ್ತಾವನೆಗಳನ್ನು ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸಲ್ಲಿಸಲು ಏಪ್ರಿಲ್ 20 ರಿಂದ ಮೇ. 5 ರವರೆಗೆ ಸಮಯಾವಕಾಶ ನೀಡಲಾಗಿದೆ.